ಬೆಳಗಾವಿಯಿಂದ ಹೊರಟ ವಿಮಾನಕ್ಕೆ ಹಕ್ಕಿ ಡಿಕ್ಕಿ; ಇಂಜಿನ್ ಬ್ಲೇಡ್​ಗೆ ಹಾನಿ..

blank

ಬೆಳಗಾವಿ: ರಾಜ್ಯದಲ್ಲಿ ವಿಮಾನವೊಂದಕ್ಕೆ ಹಕ್ಕಿ ಡಿಕ್ಕಿ ಹೊಡೆದು, ವಿಮಾನದ ಇಂಜಿನ್ ಬ್ಲೇಡ್​ಗೆ ಹಾನಿಯಾದ ಪ್ರಕರಣವೊಂದು ವರದಿಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಈ ಪ್ರಕರಣ ನಡೆದಿದ್ದು, ಸ್ಪೈಸ್​ಜೆಟ್​​ನ ವಿಮಾನಕ್ಕೆ ಧಕ್ಕೆಯಾಗಿದೆ.

ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದ ಸ್ಪೈಸ್​ಜೆಟ್​ ಬಿ737 ವಿಮಾನದಲ್ಲಿ ಇಂದು 187 ಪ್ರಯಾಣಿಕರಿದ್ದರು. ಆದರೆ ಇದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಅದಾಗ್ಯೂ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಆದರೆ ಈ ಡಿಕ್ಕಿಯಿಂದಾಗಿ ವಿಮಾನದ ಇಂಜಿನ್ ಬ್ಲೇಡ್​ಗೆ ಹಾನಿ ಆಗಿ ತಾಂತ್ರಿಕ ಅಡಚಣೆ ಉಂಟಾಗಿತ್ತು. ಇದೇ ವಿಮಾನ ಒಡಿಶಾದ ಝರ್ಸುಗುಡಗೆ ಬೆಳಗ್ಗೆ 11.55ರ ಸುಮಾರಿಗೆ ಹೊರಡಬೇಕಿತ್ತು. ಆದರೆ ಹಕ್ಕಿ ಡಿಕ್ಕಿಯಿಂದಾದ ತಾಂತ್ರಿಕ ಅಡಚಣೆ ಕಾರಣ ಬೇರೆ ವಿಮಾನ ವ್ಯವಸ್ಥೆ ಮಾಡಬೇಕಾದ್ದರಿಂದ ಈ ಪ್ರಯಾಣ ಮಧ್ಯಾಹ್ನ 2 ಗಂಟೆಗೆ ಆರಂಭವಾಯಿತು ಎಂದು ಸ್ಪೈಸ್​ ಜೆಟ್​ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಮುತ್ತಿನ ಕಥೆ: ಮದುವೆಯಂತೂ ತ್ವರಿತ, ಅದು ಬಿಂದುವಲ್ಲ ಹರಿತ!; ಖ್ಯಾತ ನಟನ ಸ್ಪಷ್ಟೀಕರಣ..

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…