

ನವದೆಹಲಿ: ಸ್ಪೈಡರ್ ಮ್ಯಾನ್‌ನಂತೆ ವೇಷ ಭೂಷಣ ಧರಿಸಿದ ವ್ಯಕ್ತಿಯೊಬ್ಬರು ಕಾರಿನ ಬಾನೆಟ್ ಮೇಲೆ ಅಪಾಯಕಾರಿ ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ದೆಹಲಿ ಟ್ರಾಫಿಕ್ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ.
ಚಾಲಕ ಮತ್ತು ಸ್ಪೈಡರ್ ಮ್ಯಾನ್ ವೇಷಭೂಷಣವನ್ನು ಧರಿಸಿದ ವ್ಯಕ್ತಿಯ ಮೇಲೆ ಭಾರೀ ದಂಡ ವಿಧಿಸಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ದೆಹಲಿಯ ದ್ವಾರಕಾ ರಸ್ತೆಗಳಲ್ಲಿ ಸ್ಪೈಡರ್ ಮ್ಯಾನ್ ವೇಷಧಾರಿ ವ್ಯಕ್ತಿಯೊಬ್ಬರು ಚಲಿಸುತ್ತಿರುವ ಕಾರಿನ ಬಾನೆಟ್‌ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ದೂರನ್ನು ಸ್ವೀಕರಿಸಿದ ದಿಲ್ಲಿ ಟ್ರಾಫಿಕ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಸ್ಪೈಡರ್‌ಮ್ಯಾನ್ ವೇಷಭೂಷಣದಲ್ಲಿರುವ ವ್ಯಕ್ತಿಯನ್ನು ಆದಿತ್ಯ (20) ಗುರುತಿಸಲಾಗಿದ್ದು ಆತ ನಜಾಫ್‌ಗಢ ನಿವಾಸಿ. ಹಾಗೂ ಕಾರಿನ ಚಾಲಕನನ್ನು ಮಹಾವೀರ್ ಎನ್‌ಕ್ಲೇವ್‌ನಲ್ಲಿ ನೆಲೆಸಿರುವ ಗೌರವ್ ಸಿಂಗ್ (19) ಎಂದು ಗುರುತಿಸಲಾಗಿದೆ.
ಅಪಾಯಕಾರಿ ಚಾಲನೆ, ಮಾಲಿನ್ಯ ಪ್ರಮಾಣ ಪತ್ರವಿಲ್ಲದೆ ಚಾಲನೆ, ಮತ್ತು ಸೀಟ್‌ಬೆಲ್ಟ್ ಧರಿಸದಿದ್ದಕ್ಕಾಗಿ ಕಾನೂನು ಕ್ರಮ ಜರುಗಿಸಲಾಗಿದ್ದು, ಗರಿಷ್ಠ 26,000 ರೂ. ದಂಡ ಅಥವಾ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಎಂದು ಸುದ್ದಿ ಸಂಸ್ಥೆ ಎಎನ್ಐ ಪೋಸ್ಟ್ ಒಂದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.