More

    ‘ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್: ಅಶ್ವಿನ್‌ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

    ಬೆಂಗಳೂರು: ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಕ್ರಿಕೆಟ್‌ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡದ ಪರ ಮೊದಲ ವಿಕೆಟ್‌ ತಂದುಕೊಟ್ಟ ಟೀಂ ಇಂಡಿಯಾ ಅನುಭವಿ ಆಟಗಾರ ರವಿಚಂದ್ರನ್‌ ಅಶ್ವಿನ್‌ ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿಬದುಕಿನಲ್ಲಿ 500 ವಿಕೆಟ್‌ಗಳ ಮಹಗತ್ವದ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

    ಇದನ್ನೂ ಓದಿ:ಟೆಸ್ಟ್ ಕ್ರಿಕೆಟ್​​ನಲ್ಲಿ 500 ವಿಕೆಟ್ ಪಡೆದ ಸ್ಪಿನ್​ ಮಾಂತ್ರಿಕ ಆರ್​.ಅಶ್ವಿನ್!

    500 ಟೆಸ್ಟ್ ವಿಕೆಟ್‌ಗಳನ್ನು ಕಬಳಿಸಿದ ರವಿಚಂದ್ರನ್ ಅಶ್ವಿನ್ ಅವರಿಗೆ ಅಭಿನಂದನೆಗಳು! ಈ ಗಮನಾರ್ಹ ಮೈಲುಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ. ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರು ಮತ್ತಷ್ಟು ಸಾಧನೆ ಮಾಡಲಿ ಎಂದು ಅವರಿಗೆ ನನ್ನ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

    ವಿಶ್ವ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 500 ಟೆಸ್ಟ್‌ ವಿಕೆಟ್‌ಗಳನ್ನು ಪಡೆದ ಎರಡನೇ ಬೌಲರ್‌ ಎನಿಸಿಕೊಂಡ ಸ್ಪಿನ್‌ ಮಾಂತ್ರಿಕ ಅಶ್ವಿನ್‌, ಈ ಮೂಲಕ ಭಾರತದ ಮಾಜಿ ನಾಯಕ ಹಾಗೂ ದಿಗ್ಗಜ ಲೆಗ್‌ ಸ್ಪಿನ್ನರ್‌ ಅನಿಲ್‌ ಕುಂಬ್ಳೆ ಅವರ ದಾಖಲೆಯನ್ನು ಮುರಿದಿದ್ದಾರೆ.

    ರಾಜ್‌ಕೋಟ್‌ ಟೆಸ್ಟ್‌ ಪಂದ್ಯಕ್ಕೂ ಮುನ್ನ ಅಶ್ವಿನ್‌ 499 ವಿಕೆಟ್‌ಗಳ ಗಡಿಯಲ್ಲಿದ್ದರು. ಅಂತೆಯೇ ಮೂರನೇ ಟೆಸ್ಟ್‌ನ ಎರಡನೇ ದಿನದಾಟದಲ್ಲಿ ಇಂಗ್ಲೆಂಡ್‌ ಓಪನರ್‌ ಜಾಕ್‌ ಕ್ರಾವ್ಲಿ (15) ಅವರನ್ನು ಔಟ್‌ ಮಾಡುವ ಮೂಲಕ 500 ವಿಕೆಟ್‌ಗಳ ಸರದಾರ ಎನಿಸಿದರು. ಟೆಸ್ಟ್‌ ಕ್ರಿಕೆಟ್‌ನಲ್ಲಿ ಅನಿಲ್‌ ಕುಂಬ್ಳೆ ಬಳಿಕ ಭಾರತ ತಂಡದ ಪರ 500 ವಿಕೆಟ್‌ ಪಡೆದ ಬೌಲರ್‌ ಎಂಬ ಹೆಗ್ಗಳಿಕೆಗೂ ಅಶ್ವಿನ್‌ ಭಾಜನರಾಗಿದ್ದಾರೆ.

    ಏನಿಲ್ಲ..ಏನಿಲ್ಲ..ಬಜೆಟ್​ನಲ್ಲಿ ಏನಿಲ್ಲ ಎಂದ ಪ್ರತಿಪಕ್ಷಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts