More

    ಕಪಿಲ್ ದೇವ್ ದಾಖಲೆ ಹಿಂದಿಕ್ಕಿದ ಆರ್.ಅಶ್ವಿನ್..!

    ಅಡಿಲೇಡ್: ಭಾರತದ ಅನುಭವಿ ಸ್ಪಿನ್ನರ್ ಆರ್.ಅಶ್ವಿನ್ ಅಡಿಲೇಡ್‌ನಲ್ಲಿ ನಡೆಯುತ್ತಿರುವ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಮುನ್ನಡೆ ಸಾಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಆರ್.ಅಶ್ವಿನ್ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳಿಗೆ ದುಸ್ವಪ್ನರಾದರು. ಸ್ಟೀವನ್ ಸ್ಮಿತ್ ವಿಕೆಟ್ ಪಡೆಯುವ ಮೂಲಕ ಅಶ್ವಿನ್ ಐತಿಹಾಸಿಕ ಸಾಧನೆಗೆ ಸಾಕ್ಷಿಯಾದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಎದುರು ಅತಿಹೆಚ್ಚು ವಿಕೆಟ್ ಕಬಳಿಸಿದ ಭಾರತೀಯ ಬೌಲರ್‌ಗಳ ಪೈಕಿ ಕಪಿಲ್ ದೇವ್ ಅವರನ್ನು ಹಿಂದಿಕ್ಕಿ ಅಶ್ವಿನ್ 3ನೇ ಸ್ಥಾನಕ್ಕೇರಿದರು.

    ಇದನ್ನೂ ಓದಿ: ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆ ಸಾಧಿಸಿದ ಭಾರತ

    ಕಡೇ 8 ಪಂದ್ಯಗಳಲ್ಲಿ 7 ಶತಕ ಸಿಡಿಸಿದ್ದ ಸ್ಮಿತ್‌ಗೆ ಅಶ್ವಿನ್ ಪೆವಿಲಿಯನ್ ದಾರಿ ತೋರಿದರು. ಅಶ್ವಿನ್ ಎಸೆತವನ್ನು ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ ಸ್ಮಿತ್, ಸ್ಲಿಪ್‌ನಲ್ಲಿದ್ದ ರಹಾನೆಗೆ ಕ್ಯಾಚ್ ನೀಡಿದರು. ಆಸ್ಟ್ರೇಲಿಯಾ ಎದುರು ಅತಿಹೆಚ್ಚು ವಿಕೆಟ್ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ. ಅಶ್ವಿನ್ ಇದುವರೆಗೂ 80 ವಿಕೆಟ್ ಕಬಳಿಸಿದ್ದಾರೆ. ಕನ್ನಡಿಗ ಅನಿಲ್ ಕುಂಬ್ಳೆ (111) ಮೊದಲ ಸ್ಥಾನದಲ್ಲಿದ್ದರೆ, ಹರ್ಭಜನ್ ಸಿಂಗ್ (95) ಎರಡನೇ ಸ್ಥಾನದಲ್ಲಿದ್ದಾರೆ. ಕಪಿಲ್ ದೇವ್ ಆಸೀಸ್ ವಿರುದ್ಧ ಆಡಿದ 20 ಟೆಸ್ಟ್ ಪಂದ್ಯಗಳಿಂದ 79 ವಿಕೆಟ್ ಪಡೆದಿದ್ದರೆ, ಅಶ್ವಿನ್ 16ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದರು.

    ಇದನ್ನೂ ಓದಿ: ಆಸ್ಟ್ರೇಲಿಯಾ ಎದುರು ದಾಖಲೆ ಬರೆದ ಭಾರತದ ಚೇತೇಶ್ವರ್ ಪೂಜಾರ…!,

    ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಶುಕ್ರವಾರ 6 ವಿಕೆಟ್‌ಗೆ 233 ರನ್‌ಗಳಿಂದ 2ನೇ ದಿನದಾಟ ಆರಂಭಿಸಿದ ಭಾರತ ತಂಡ 244 ರನ್‌ಗಳಿಗೆ ಸರ್ವಪತನ ಕಂಡಿತು. ಬಳಿಕ ಆಸ್ಟ್ರೇಲಿಯಾ ತಂಡ, ನಾಯಕ ಟಿಮ್ ಪೇನ್ (73*ರನ್, 99 ಎಸೆತ, 10 ಬೌಂಡರಿ) ಏಕಾಂಗಿ ನಿರ್ವಹಣೆ ನಡುವೆಯೂ ಭಾರತದ ದಾಳಿಗೆ ನಲುಗಿ 191 ರನ್‌ಗಳಿಗೆ ಸರ್ವಪತನ ಕಂಡಿತು. ಇದರಿಂದ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 53 ರನ್ ಮುನ್ನಡೆ ಸಾಧಿಸಿತು. ಬಳಿಕ ದ್ವಿತೀಯ ಇನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಕಂಡಿರುವ ಭಾರತ, ದಿನದಂತ್ಯಕ್ಕೆ 1 ವಿಕೆಟ್‌ಗೆ 9 ರನ್ ಗಳಿಸಿದ್ದು, ಒಟ್ಟಾರೆ 62 ರನ್ ಮುನ್ನಡೆ ಸಾಧಿಸಿದೆ.

    ಕರೊನಾ ಹಾವಳಿಯಿಂದಾಗಿ ಮತ್ತೊಂದು ಕ್ರೀಡಾ ಲೀಗ್ ಮುಂದೂಡಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts