

ಶಿರ್ವ: ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಆಧ್ಯಾತ್ಮ ಹಾಗೂ ಭಗವಂತನ ಮೇಲಿನ ನಂಬಿಕೆ ಇಟ್ಟುಕೊಂಡು ಮುನ್ನುಗ್ಗಿದಾಗ ಜೀವನದಲ್ಲಿ ಉನ್ನತ ಸ್ಥಾನ ಏರಲು ಸಾಧ್ಯ ಎಂದು ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಹೇಳಿದರು.
ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 15ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು.
ಉಡುಪಿ ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ವಿಶ್ವವಲ್ಲಭ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಐಟಿ ಕಂಪನಿ ಡಾಟಾ ಪ್ಯಾಟರ್ನ್ಸ್ ಲಿಮಿಟೆಡ್ ಮುಖ್ಯಸ್ಥ ಶ್ರೀನಿವಾಸ ಗೋಪಾಲನ್ ರಂಗರಾಜನ್, ರೇಖಾಮೂರ್ತಿ ರಂಗರಾಜನ್, ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಉಪಾಧ್ಯಕ್ಷ ಶ್ರೀನಿವಾಸ ತಂತ್ರಿ, ಉಪ ಪ್ರಾಂಶುಪಾಲ ಡಾ.ಗಣೇಶ್ ಐತಾಳ್, ಆಡಳಿತ ಮಂಡಳಿ ಸದಸ್ಯ ಡಾ.ಎಸ್.ಜಿ.ಗೋಪಾಲಕೃಷ್ಣ, ಹರೀಶ್ ಬೆಳ್ಮಣ್, ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ಅನುರಾಗ್ ಆರ್.ರಾವ್ ಉಪಸ್ಥಿತರಿದ್ದರು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಕಾರ್ಯದರ್ಶಿ ರತ್ನಕುಮಾರ್ ಸ್ವಾಗತಿಸಿದರು. ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ವಾರ್ಷಿಕ ವರದಿ ವಾಚಿಸಿದರು. ಪ್ರಾಧ್ಯಾಪಕ ಡಾ.ಶಿಲ್ಪಾ ಕಾಮತ್, ಡಾ.ರಾಜಾ ಯತೀಶ್ ಯಾದವ್ ಮತ್ತು ರಾಘವೇಂದ್ರ ಜಿ.ಎಸ್. ಅತಿಥಿಗಳನ್ನು ಪರಿಚಯಿಸಿದರು. ಡೀನ್ ಡಾ.ಸುದರ್ಶನ್ ರಾನ್ ಮತ್ತು ಡಾ.ರವಿಪ್ರಭಾ ವಿದ್ಯಾರ್ಥಿವೇತನ ಪಡೆದವರ ವಿವರ ನೀಡಿದರು. ಚಿತ್ಕಲಾ ಪ್ರಾರ್ಥಿಸಿದರು. ಪ್ರಾಧ್ಯಾಪಕ ಸೌಮ್ಯಾ ಭಟ್ ಮತ್ತು ಮಲ್ಯ ಅನಂತ್ ಮೋಹನ್ ನಿರೂಪಿಸಿದರು. ಪ್ರಾಧ್ಯಾಪಕ ಸಚಿನ್ ಪ್ರಭು ವಂದಿಸಿದರು.
ಶ್ರೀಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಹಾಗೂ ಗೌತಮ ಫೌಂಡೇಶನ್‌ನಿಂದ ನೀಡಲ್ಪಟ್ಟ ವಿದ್ಯಾರ್ಥಿವೇತನ ವಿತರಿಸಲಾಯಿತು. ಅಂತಿಮ ವರ್ಷದ ಉತ್ತಮ ಸಾಧಕ ವಿದ್ಯಾರ್ಥಿಗಳಿಗೆ ಕೊಡುವ ಶ್ರೀಮಧ್ವ ವಾದಿರಾಜ ಪ್ರಶಸ್ತಿಯನ್ನು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ಪ್ರಥಮ್ ಎಲ್.ಕಾಮತ್ ಮತ್ತು ಹಿತಾಶ್ರೀ ಅವರಿಗೆ ನೀಡಿ ಗೌರವಿಸಲಾಯಿತು. ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಹಯವದನ ಪ್ರಶಸ್ತಿ ನೀಡಲಾಯಿತು. ಡಾಕ್ಟರೇಟ್ ಪದವಿ ಪಡೆದ ಅಧ್ಯಾಪಕರನ್ನು ಗೌರವಿಸಲಾಯಿತು.