More

    ಆಯನೂರುಗೆ ವಕ್ತಾರ ಜವಾಬ್ದಾರಿ

    ಬೆಂಗಳೂರು: ಬಿಜೆಪಿಯಿಂದ ಜೆಡಿಎಸ್‌ಗೆ ವಲಸೆ ಹೋಗಿ ಅಲ್ಲಿಂದ ಕಾಂಗ್ರೆಸ್‌ಗೆ ಜಿಗಿದ ಮಾಜಿ ಸಂಸದ ಆಯನೂರು ಮಂಜುನಾಥ್‌ಗೆ ಕೆಪಿಸಿಸಿ ವಕ್ತಾರ ಹುದ್ದೆ ಒಲಿದುಬಂದಿದೆ.
    ಆಯನೂರು ಮಂಜುನಾಥ್ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಹಾಗೂ ಸಾಮಾಜಿ ಜಾಲತಾಣದಲ್ಲಿ ಸಾರ್ವಜನಿಕವಾಗಿ ಹಾಗೂ ರಾಜಕೀಯ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಇರುವುದನ್ನು ಗಮನಿಸಿ ವಕ್ತಾರ ಹುದ್ದೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಳಿಕ ಕಾಂಗ್ರೆಸ್‌ಗೆ ಆಶ್ರಯ ಬಯಸಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಬಿಜೆಪಿಗೆ ಆಗಮಿಸಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಆಯನೂರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಜಿಗಿದು ಅಭ್ಯರ್ಥಿಯಾಗಿದ್ದರು. ಬಂಗಾರಪ್ಪ ಬಿಜೆಪಿ ತೊರೆದ ಬಳಿಕ ಆಯನೂರು ಪುನಃ ಮಾತೃಪಕ್ಷಕ್ಕೆ ಬರಳಿದ್ದರು. ಈ ನಡುವೆ ಜನತಾ ಪಕ್ಷಕ್ಕೂ ಹೋಗಿಬಂದಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts