

ಕಿನ್ನಿಗೋಳಿ: ಐಕಳ ಕಂಬಳ ಸಮಿತಿ ಕಂಬಳಕ್ಕೆ ಮಾತ್ರ ಸೀಮಿತವಾಗದೆ, ಕ್ರೀಡೋತ್ಸವಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ. ಇಂತಹ ಕಾರ್ಯಕ್ರಮಕ್ಕೆ ನಿರಂತರ ಪ್ರೋತ್ಸಾಹ ನೀಡಲಾಗುವುದು ಎಂದು ಎಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ಹೇಳಿದರು.
ಐಕಳಬಾವ ಕಾಂತಾಬಾರೆ ಬೂದಾಬಾರೆ ಜೋಡುಕರೆ ಕಂಬಳ ಸಮಿತಿ ವತಿಯಿಂದ ತುಳು ಜನಪದ ಕ್ರೀಡೋತ್ಸವ ಐಕಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಏಳಿಂಜೆ ದೇವಸ್ಥಾನದ ಪ್ರಧಾನ ಅರ್ಚಕ ಗಣೇಶ್ ಭಟ್ ಆಶೀರ್ವಚನ ನೀಡಿದರು. ಕಂಬಳ ಸಮಿತಿ ಕಾರ್ಯಾಧ್ಯಕ್ಷ ಚಿತ್ತರಂಜನ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಸಮಿತಿ ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕಂಬಳ ಸಮಿತಿ ಸಂಘಟನಾ ಕಾರ್ಯದರ್ಶಿ ಸಾಯಿನಾಥ ಶೆಟ್ಟಿ, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಶೆಟ್ಟಿ, ಉದ್ಯಮಿ ರಘುರಾಮ ಶೆಟ್ಟಿ ಏಳಿಂಜೆ, ಲೋಕನಾಥ ಶೆಟ್ಟಿ ಏಳಿಂಜೆ, ಕಾಂತಾಬಾರೆ ಬೂದಾಬಾರೆ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ತಾರಾನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಶ್ರೀಶ ಸರಫ್ ಐಕಳ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ ಮುಂಡ್ಕೂರು ವಂದಿಸಿದರು.