More

    ಮಾನಸಿಕ ಆರೋಗ್ಯಕ್ಕೂ ಕ್ರೀಡೆ ಸಹಕಾರಿ

    ಸೊರಬ: ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆ ಸಹಕಾರಿ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಹೇಳಿದರು.

    ಪಟ್ಟಣದ ಬಂಗಾರಪ್ಪ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಾಲೂಕು ಸರ್ಕಾರಿ ನೌಕರರ ಸಂಘದ ಕ್ರೀಡಾಕೂಟದ ಧ್ವಜರೋಹಣ ನೆರವೇರಿಸಿ ಮಾತನಾಡಿ, ಜೀವನದಲ್ಲಿ ಶಾಂತಿ, ನೆಮ್ಮದಿ ದೊರೆಯಬೇಕಾದರೆ ದೇಹ ದಂಡನೆ ಜತೆಗೆ ಉತ್ತಮ ಆಹಾರ ಸೇವನೆ ಸಹ ಮುಖ್ಯ. ಪ್ರತಿನಿತ್ಯ ಯೋಗಾಸನ ಹಾಗೂ ಉತ್ತಮ ಆಲೋಚನೆಗಳು ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವ್ಯಕ್ತಿ ಋಣಾತ್ಮಕ ಅಂಶಗಳಿಂದ ದೂರವಿದ್ದು, ಬದುಕಿಗೆ ನೆರವಾಗಬಲ್ಲ ವಿಚಾರ ವಿನಿಮಯ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯಕ. ಈ ನಿಟ್ಟನಲ್ಲಿ ನೌಕರ ವರ್ಗ ಒಂದು ದಿನದ ಕ್ರೀಡೆಯನ್ನು ಹಮ್ಮಿಕೊಂಡು ಎಲ್ಲರ ಜತೆ ಬೇರೆಯಲು ಸಾಧ್ಯವಾಗಿದೆ ಎಂದರು.
    ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ಮಂಜುನಾಥ್ ಮಾತನಾಡಿ, ಸರ್ಕಾರಿ ನೌಕರರು ದಿನನಿತ್ಯ ಕರ್ತವ್ಯದ ಸಂದರ್ಭದಲ್ಲಿ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಒತ್ತಡದಲ್ಲಿರುತ್ತಾರೆ. ಈ ಒತ್ತಡ ಮುಕ್ತ ಜೀವನದಿಂದ ಹೊರ ಬಂದು, ಉಲ್ಲಾಸ ಹೊಂದಲು ಕ್ರೀಡಾ ಚಟುವಟಿಕೆಗಳು ಪೂರಕವಾಗಿದೆ. ಆಟಗಳಲ್ಲಿ ಸಂತೋಷದಿಂದ ಪಾಲ್ಗೊಳ್ಳಿ ಎಂದು ಹೇಳಿದರು.
    ಸರ್ಕಾರಿ ನೌಕರರ ಸಂಘ ನೌಕರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಯ ನೌಕರರ ಸಹಕಾರ ಅಗತ್ಯವಿದೆ. ಮುಂದಿನ ದಿನದಲ್ಲಿ ತಾಲೂಕು ನೌಕರರ ಸಮ್ಮೇಳನ ಹಮ್ಮಿಕೊಳ್ಳುವ ಚಿಂತನೆ ನಡೆದಿದೆ ಎಂದರು. ಇಒ ಡಾ. ಎನ್.ಆರ್.ಪ್ರದೀಪ್ ಕುಮಾರ್, ಬಿಇಒ ಸತ್ಯನಾರಾಯಣ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಜಿ.ಕುಮಾರ್, ಪುರಸಭೆ ಮುಖ್ಯಾಧಿಕಾರಿ ಟಿ.ಬಾಲಚಂದ್ರಪ್ಪ, ಎಪಿಎಂಸಿ ಕಾರ್ಯದರ್ಶಿ ಆಶಾ, ಬಿಸಿಎಂ ವಿಸ್ತರಣಾಧಿಕಾರಿ ರೇವಣಪ್ಪ, ರಾಜ್ಯ ನೌಕರ ಸಂಘದ ಸದಸ್ಯ ಸರ್ವಜ್ಞಮೂರ್ತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಸದಾನಂದ, ಅಬಕಾರಿ ಇನ್ಸ್‌ಪೆಕ್ಟರ್ ಶ್ರೀನಾಥ, ನಾಗರಾಜ್ ಅನ್ವಕರ್, ನಾಗರಾಜ್, ವಿಶ್ವನಾಥ, ಗಿರಿಧರ್, ಹಾಲಪ್ಪ, , ಚಿದಾನಂದ, ಗುರುರಾಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts