ಕಲಿಕೆಯೊಂದಿಗೆ ಕ್ರೀಡೆಯು ಅಗತ್ಯ

hbr (2)
Published on

ಹೆಬ್ರಿ: ಕಲಿಕೆಯೊಂದಿಗೆ ಕ್ರೀಡೆ ವಿದ್ಯಾರ್ಥಿಗಳಿಗೆ ಬಹುಮುಖ್ಯ. ಗೆಲುವಿಗಿಂತ ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ, ಕ್ರೀಡಾ ಸ್ಫೂರ್ತಿಯಿಂದ ಆಡಬೇಕು ಎಂದು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕಾರ್ಕಳ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಜಂಟಿ ಆಶ್ರಯದಲ್ಲಿ ಎಸ್.ಆರ್. ಕ್ರೀಡಾಂಗಣದಲ್ಲಿ ಶನಿವಾರ ನಡೆದ ಹೆಬ್ರಿ ಕ್ಲಸ್ಟರ್ ಮಟ್ಟದ ಪ್ರೌಢ ಶಾಲಾ ವಿಭಾಗದ ವಾಲಿಬಾಲ್, ಥ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರವಿಚಂದ್ರ ಕಾರಂತ್, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಮುಖ್ಯ ಶಿಕ್ಷಕ ಗೋಪಾಲ್ ಆಚಾರ್ಯ ಉಪಸ್ಥಿತರಿದ್ದರು. ಶಿಕ್ಷಕ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net