

ಕಾರ್ಕಳ: ಕ್ರೀಡೆ ದೈಹಿಕ ಹಾಗೂ ಮಾನಸಿಕವಾಗಿ ಅತ್ಯಂತ ಪ್ರಯೋಜನಕಾರಿಯಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ, ಮಾರ್ಗದರ್ಶನ ನೀಡಿದಲ್ಲಿ ಕ್ರೀಡೆ ಹಾಗೂ ಶಿಕ್ಷಣದಲ್ಲಿ ಮುನ್ನೆಲೆಗೆ ಬರಲು ಸಾಧ್ಯ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟ ಅಧ್ಯಕ್ಷ ಸುಚರಿತ ಶೆಟ್ಟಿ ಹೇಳಿದರು.
ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಮುಂಡ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆತಿಥ್ಯದಲ್ಲಿ ಮಂಗಳವಾರ ಬೆಳ್ಮಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲೆ ಬಾಲಕ ಬಾಲಕಿಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಎಸ್‌ಡಿಎಂಸಿ ಅಧ್ಯಕ್ಷ ಉಮಾಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಪಥಸಂಚನದ ಗೌರವ ಸ್ವೀಕರಿಸಿದರು. ಕ್ರೀಡಾಕೂಟ ಉಸ್ತುವಾರಿ ಕಲ್ಯಾ ಸರ್ಕಾರಿ ಹಿ.ಪ್ರಾ.ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಪ್ರತಿಜ್ಞಾ ವಿಧಿ ಭೋಧಿಸಿದರು. ಕಜೆ ಮಹಾಮ್ಮಾಯಿ ದೇವಳ ಆಡಳಿತ ಮಂಡಳಿ ಗೌರವಾಧ್ಯಕ್ಷ ಎಂ.ಜಿ.ಕರ್ಕೇರ ಧ್ವಜಾರೋಹಣ ನಡೆಸಿದರು.
ದ.ಕ. ಹಾಲು ಒಕ್ಕೂಟ ನಿರ್ದೇಶಕ ಸದಾಶಿವ ಶೆಟ್ಟಿ, ನಿವೃತ್ತ ಕಂದಾಯ ಅಧಿಕಾರಿ ಆವಿಲ್ ಡಿಸೋಜ, ಮುಂಡ್ಕೂರು ನಮ್ಮ ಫ್ರೆಂಡ್ಸ್ ಅಧ್ಯಕ್ಷ ಅರುಣ್ ರಾವ್, ಮುಂಡ್ಕೂರು-ಕಡಂದಲೆ ಲಯನ್ ಅಧ್ಯಕ್ಷ ಪ್ರಶಾಂತ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ರಮಾನಂದ ಶೆಟ್ಟಿ, ನಿಕಟಪೂರ್ವ ಸಿಆರ್‌ಪಿ ಚಂದ್ರಕಾಂತ ಡೇಸಾ, ಮುಂಡ್ಕೂರು ವಿದ್ಯಾವರ್ಧಕ ಪ.ಪೂ.ಕಾಲೇಜು ಪ್ರಾಚಾರ್ಯ ಮಾಲತೇಶ್ ಇಂಗಳಕಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸವಿತಾ ಸದಾನಂದ, ವೀಣಾ ಕಾಮತ್, ಮುಂಡ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಶೆಟ್ಟಿ ಮತ್ತಿತರರಿದ್ದರು.
ವಸಂತ ಕಲ್ಯಾ ಹಾಗೂ ರಮಾನಂದ ಶೆಟ್ಟಿ ಅವರನ್ನು ಗೌರವಿಸಲಾಯಿತು. ಮುಂಡ್ಕೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ರಂಗಸ್ವಾಮಿ ಸ್ವಾಗತಿಸಿದರು. ಶಿಕ್ಷಕ ಶ್ರೀಕಾಂತ್ ಮೂಲ್ಯ ವಂದಿಸಿದರು. ವಿದ್ಯಾವರ್ಧಕ ಪ್ರೌಡಶಾಲೆ ಕನ್ನಡ ಅಧ್ಯಾಪಕ ಪ್ರಭಾಕರ ಶೆಟ್ಟಿ ನಿರೂಪಿಸಿದರು.