More

    ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

    ಕೊಳ್ಳೇಗಾಲ : ಪಟ್ಟಣದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಗುರುವಾರ ಮೈಸೂರು ವಿಶ್ವವಿದ್ಯಾನಿಲಯ ಸಹಯೋಗದೊಂದಿಗೆ ಚಾಮರಾಜ ವಲಯ ಮಟ್ಟದ ಮಹಿಳಾ ಕ್ರೀಡಾಕೂಟ-2024 ಏರ್ಪಡಿಸಲಾಗಿತ್ತು.

    ಕ್ರೀಡಾಕೂಟದ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.ಎ.ಆರ್. ಮದನ್‌ಕುಮಾರ್ ಮಾತನಾಡಿ, ಕ್ರೀಡೆ ಪ್ರತಿಯೊಬ್ಬರ ಜೀವನದಲ್ಲಿ ವಿಶೇಷ ಪಾತ್ರ ವಹಿಸುತ್ತದೆ. ಒಬ್ಬ ವ್ಯಕ್ತಿಯನ್ನು ಆರೋಗ್ಯಕರವಾಗಿ, ಸಮೃದ್ಧವಾಗಿ ಮತ್ತು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ. ಆರೋಗ್ಯವಂತ ದೇಹದಿಂದ ಮಾತ್ರ ಮನುಸ್ಸು ಆರೋಗ್ಯವಾಗಿರಲು ಸಾಧ್ಯ. ನಾವು ಎಲ್ಲ ಸಮಯದಲ್ಲೂ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಗೊಂಡಾಗ ಮಾತ್ರ ಜೀವನದಲ್ಲಿ ಉತ್ತಮ ಸಾಧನೆಗಳನ್ನು ಮಾಡಬಹುದು ಎಂದರು.

    ಜೆಎಸ್‌ಎಸ್ ಮಹಿಳಾ ಕಾಲೇಜು ಪ್ರಾಚಾರ್ಯ ಡಾ.ಎಂ.ಪ್ರಭು ಮಾತನಾಡಿ, ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆಗಳಲ್ಲಿ ಭಾಗವಹಿಸುವುದು ಬಹಳ ಮುಖ್ಯ. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಗೆದ್ದಾಗ ಅಥವಾ ಸೊತಾಗ ನಿಮ್ಮ ಆತ್ಮವಿಶ್ವಾಸ ಗಟ್ಟಿಗೊಳ್ಳುವುದರ ಜತೆಗೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದರು.

    ಇದಕ್ಕೂ ಮೊದಲು ನಡೆದ ಕ್ರೀಡೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ಚಾಮರಾಜ ವಲಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕ್ರೀಡಾ ಸಂಚಾಲಕ ಡಾ.ಕೆ. ಚಂದ್ರಶೇಖರ್, ಐಕ್ಯೂಎಸಿ ಸಂಚಾಲಕ ಎಚ್.ಜಿ ನಟರಾಜನ್, ಜೆಎಸ್‌ಎಸ್ ಮಹಿಳಾ ಕಾಲೇಜು ದೈಹಿಕ ಶಿಕ್ಷಣ ಸಂಚಾಲಕ ಎಸ್.ಶ್ರೀಧರ್, ಗುಂಡ್ಲುಪೇಟೆ ಜೆಎಸ್‌ಎಸ್ ಮಹಿಳಾ ಕಾಲೇಜು ದೈಹಿಕ ಶಿಕ್ಷಣ ಸಂಚಾಲಕ ಮಲ್ಲುಸ್ವಾಮಿ, ಚಾಮರಾಜ ವಲಯದ ವಿವಿಧ ಕಾಲೇಜುಗಳ ದೈಹಿಕ ನಿರ್ದೇಶಕರು ಮತ್ತು ಸ್ಪರ್ಧಾರ್ಥಿಗಳು ಕ್ರೀಡಾಕೂಟದಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts