More

    ದೈಹಿಕ, ಮಾನಸಿಕ ನೆಮ್ಮದಿಗೆ ಕ್ರೀಡೆ ಸಹಕಾರಿ

    ಶಿವಮೊಗ್ಗ: ದಿನನಿತ್ಯ ಕೆಲಸದ ಒತ್ತಡದಲ್ಲೇ ಕಾಲ ಕಳೆಯುವ ಪೊಲೀಸ್ ಅಧಿಕಾರಿ-ಸಿಬ್ಬಂದಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಮಂಜುನಾಥ ನಾಯ್ಕ ಹೇಳಿದರು.

    ನಗರದ ಡಿಎಆರ್ ಮೈದಾನದಲ್ಲಿ ಬುಧವಾರ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದಿಂದ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯು ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಮಾತ್ರವಲ್ಲದೆ ದಿನವಿಡೀ ಲವಲವಿಕೆಯಿಂದಿರಲು ಮತ್ತು ಉಲ್ಲಸಿತನಾಗಿರುವಲ್ಲಿ ಸಹಕಾರಿಯಾಗಲಿದೆ. ಇದರಿಂದ ವೃತ್ತಿಜೀವನ ಸಂತಸದಾಯಕವಾಗಿರಲಿದೆ ಎಂದರು.
    ಕ್ರೀಡೆಗಳಲ್ಲಿ ಸೋಲು ಸಾಮಾನ್ಯ ಸಂಗತಿ. ಪ್ರತಿ ಹಂತದಲ್ಲೂ ಗೆಲುವನ್ನೇ ನಿರೀಕ್ಷಿಸುವುದು ಸಾಧ್ಯವಿಲ್ಲ. ಅನೇಕ ಸಂದರ್ಭಗಳಲ್ಲಿ ಸೋಲುಗಳು ವ್ಯಾವಹಾರಿಕ ಬದುಕಿನಲ್ಲಿ ಗೆಲ್ಲುವುದನ್ನು, ಸವಾಲುಗಳಿಗೆ ಮುಖಾಮುಖಿಯಾಗುವುದನ್ನು ತಿಳಿಸುತ್ತವೆ. ಸೋಲು ಮುಂದಿನ ಗೆಲುವಿಗೆ ಮುನ್ನುಡಿಯಾಗುತ್ತವೆ ಎಂದರು.
    ಕ್ರೀಡೆಯು ವ್ಯಕ್ತಿಗೆ ಉಲ್ಲಾಸದಾಯಕ ವಾತಾವರಣ ನಿರ್ಮಿಸಲು ಸಹಕಾರಿಯಾಗಿರುವಂತೆಯೇ ತನ್ನಲ್ಲಿ ಸುಪ್ತವಾಗಿರುವ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಸದಾ ಲವಲವಿಕೆಯಿಂದಿರಲು, ಕಾರ್ಯಕ್ಷೇತ್ರದಲ್ಲಿ ಉತ್ಸುಕರಾಗಿರಲು ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದರು.
    ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಎಎಸ್ಪಿ ಅನಿಲ್‌ಕುಮಾರ್ ಭೂಮರೆಡ್ಡಿ ಸೇರಿ ಜಿಲ್ಲೆಯ ಎಲ್ಲ ಠಾಣೆಗಳ ಪೊಲೀಸ್ ಅಧಿಕಾರಿ-ಸಿಬ್ಬಂದಿ ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts