More

    ಶಿಕ್ಷಕರ ಸುಸ್ಥಿರ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

    ಶಿವಮೊಗ್ಗ: ಪ್ರತಿನಿತ್ಯ ಮಕ್ಕಳಿಗೆ ಶಿಸ್ತು, ಕ್ರೀಡೆಯ ಬಗ್ಗೆ ಹರಿವು ಮೂಡಿಸುವ ದೈಹಿಕ ಶಿಕ್ಷಕರೂ ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮೂಲಕ ಸುಸ್ಥಿರ ಆರೋಗ್ಯವನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ದೈಹಿಕ ಶಿಕ್ಷಣ ಅಧಿಕಾರಿ ಬಿ.ಎಚ್.ನಿರಂಜನ್‌ಮೂರ್ತಿ ಅಭಿಪ್ರಾಯಪಟ್ಟರು.

    ಗೋಪಾಳದ ಶಾರದಾದೇವಿ ಅಂದರ ವಿಕಾಸ ಶಾಲಾ ಕ್ರೀಡಾಂಗಣದಲ್ಲಿ ಶಿವಮೊಗ್ಗ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡಾಕೂಟದಲ್ಲಿ ಪ್ರೀತಿ, ವಿಶ್ವಾಸದಿಂದ ಭಾಗವಹಿಸಿ, ವರ್ಷಕ್ಕೊಮ್ಮೆ ಇಂತಹ ಕ್ರೀಡೆಗಳು ಶಿಕ್ಷಕರಿಗೆ ಅಗತ್ಯವಾಗಿ ಬೇಕಾಗುತ್ತದೆ ಎಂದರು.
    ಶಿವಮೊಗ್ಗದ ಬಿಲ್ವಾ ಸ್ಪೋಟ್ಸ್‌ನ ಚೇತನ್ ಮಾತನಾಡಿ, ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು. ಶಿವಮೊಗ್ಗ ವಕೀಲರ ಸಂಘದ ಕಾರ್ಯದರ್ಶಿ ಗಂಗಾಧರ್, ಜಿಲ್ಲಾ ಅನುದಾನರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ.ಹ.ತಿಮ್ಮೇನಹಳ್ಳಿ ಮಾತನಾಡಿದರು.
    ವಿಜೇತ ತಂಡಗಳಿಗೆ ಟ್ರೋಫಿ, ವೈಯಕ್ತಿಕ ಬಹುಮಾನಗಳು ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಕೆ.ಎಂ.ಜಗದೀಶ್, ಬಿ.ಬಸವರಾಜ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ನವೀನ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ುಟ್‌ಬಾಲ್ ಸಂಸ್ಥೆಯ ಅಧ್ಯಕ್ಷ ಶ್ರೀನಾಥ್, ಕೆ.ಜಿ.ಮಠಪತಿ, ಸೋಮಶೇಖರ್, ಸುರೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts