

ನೆಲ್ಯಾಡಿ: ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರೀಶ ಕಲಾಮಂದಿರದಲ್ಲಿ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ ಕ್ರೀಡಾಕೂಟ ನಡೆಯಿತು.
ಗಣೇಶೋತ್ಸವ ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಕಟ್ಟೆಮಜಲು ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಗ್ರಾಪಂ ಅಧ್ಯಕ್ಷ ಉದಯ್ ಕುಮಾರ್ ಗೌಡ ದೊಂತಿಲ ಕಾರ್ಯಕ್ರಮ ಉದ್ಘಾಟಿಸಿದರು. ಉದಯ್ ಕುಮಾರ್ ಶೆಟ್ಟಿ ಗೊಳಿತೊಟ್ಟು, ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಕೆ.ಎಸ್. ಮುಖ್ಯ ಅತಿಥಿಗಳಾಗಿದ್ದರು.
ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಅಣ್ಣಿ ಎಲ್ತೀಮಾರ್, ಕೋಶಾಧಿಕಾರಿ ರಾಕೇಶ್ ಎಸ್., ಉಪಾಧ್ಯಕ್ಷ ಚಂದ್ರಶೇಖರ ಪೆರಣ, ದೇವಸ್ಥಾನದ ಉಪಾಧ್ಯಕ್ಷ ರವಿಚಂದ್ರ ಹೊಸವೊಕ್ಲು ಉಪಸ್ಥಿತರಿದ್ದರು. ರವಿಪ್ರಸಾದ್ ಗುತ್ತಿನ ಮನೆ ಸ್ವಾಗತಿಸಿದರು. ರವಿಚಂದ್ರ ಹೊಸವೊಕ್ಲುವಂದಿಸಿದರು. ದೀಪಕ್ ನಿರೂಪಿಸಿದರು. ಸುರೇಶ್ ಪಡಿಪಂಡ ಕ್ರೀಡಾಕೂಟ ನಿರ್ವಹಿಸಿದರು. ಸಾರ್ವಜನಿಕರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.