ಮಂಜೇಶ್ವರ ಉಪಜಿಲ್ಲಾಮಟ್ಟದ ಕ್ರೀಡಾಮೇಳಕ್ಕೆ ಚಾಲನೆ

New Project (22)
Published on

ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ, ಶ್ರೀ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾಮಟ್ಟದ ಕ್ರೀಡಾಮೇಳಕ್ಕೆ ಮಂಗಳವಾರ ಧ್ವಜಾರೋಹಣಗೈದು ಚಾಲನೆ ನೀಡಲಾಯಿತು.

ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಜಾರ್ಜ್ ಕ್ರಾಸ್ತ ಧ್ವಜಾರೋಹಣ ನೆರವೇರಿಸಿದರು. ಮೀಂಜ ಗ್ರಾಪಂ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲು, ಸದಸ್ಯರಾದ ಜನಾರ್ದನ ಪೂಜಾರಿ, ಮೊಹಮ್ಮದ್ ಕುಂಞ್ಞೆ, ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಸಂಚಾಲಕ ಡಾ.ಜಯಪ್ರಕಾಶ ನಾರಾಯಣ, ಪ್ರಾಂಶುಪಾಲ ರಮೇಶ್ ಕೆ.ಎನ್., ಮುಖ್ಯಶಿಕ್ಷಕಿ ಮೃದುಲ ಕೆ.ಎಂ., ಪಿ.ಟಿ.ಎ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ, ಎಂ.ಪಿ.ಟಿ.ಎ ಅಧ್ಯಕ್ಷೆ ನಬೀಸತ್ ಮಿಸ್ರಿಯ, ಕ್ರೀಡಾಮೇಳದ ಕಾರ್ಯದರ್ಶಿ ಗ್ಯಾರಿ ಗಿಲ್ಮೋರ್, ಮಂಜೇಶ್ವರ ಉಪಜಿಲ್ಲಾ ಮುಖ್ಯಶಿಕ್ಷಕರ ಸಂಘದ ಕಾರ್ಯದರ್ಶಿ ಶಾಮ ಭಟ್ ಯು., ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆ ನಿವೃತ್ತ ಮುಖ್ಯಶಿಕ್ಷಕ ಶ್ರೀಧರ ರಾವ್, ಶ್ರೀ ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಅರವಿಂದಾಕ್ಷ ಭಂಡಾರಿ, ಎಸ್.ಎಂ.ಸಿ ಅಧ್ಯಕ್ಷ ಹಮೀದ್ ಮೈತಾಳ ಮತ್ತಿತರರು ಉಸ್ಥಿತರಿದ್ದರು.

ಮೂರು ದಿನ ನಡೆಯುವ ಕ್ರೀಡಾ ಮೇಳದಲ್ಲಿ ವಿವಿಧ ಶಾಲೆಗಳಿಂದ ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸುವರು. ಉಪಜಿಲ್ಲೆಯ 85ಕ್ಕಿಂತಲೂ ಮಿಕ್ಕಿದ ಶಾಲೆಗಳ ಸಾವಿರಕ್ಕಿಂತಲೂ ಮಿಕ್ಕಿದ ವಿದ್ಯಾರ್ಥಿಗಳು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net