ಸೌಹಾರ್ದ, ಸಾಮರಸ್ಯದ ಬದುಕಿಗೆ ಕ್ರೀಡೆ: ಡಾ.ಎಂ.ಮೋಹನ್ ಆಳ್ವ ಅನಿಸಿಕೆ

Mbd_Sports

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ, ಸಾಮರಸ್ಯದ ಬದುಕನ್ನು ಕಲಿಸುವುದರ ಜತೆಗೆ ಹೋರಾಟ ಮನೋಭಾವ ಮೈಗೂಡಿಸಿಕೊಳ್ಳಲು ಸಹಕಾರಿ. ಇದೇ ಮೊದಲ ಬಾರಿಗೆ ಇಂಥ ಕ್ರೀಡಾಕೂಟ ಆಯೋಜಿಸಲಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಏರ್ಪಡಿಸುವ ಉದ್ದೇಶವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್‌ನ ದ.. ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ.ಮೋಹನ್ ಆಳ್ವ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ಸ್ವರಾಜ್ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಸ್ಕೌಟ್ಸ್ ಆಯುಕ್ತ ಬಿ.ಮೊಹಮ್ಮದ್ ತುಂಬೆ, ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್, ಜಿಲ್ಲಾ ಕೋಶಾಧಿಕಾರಿ ನವೀನ್‌ಚಂದ್ರ ಅಂಬೂರಿ, ಜಿಲ್ಲಾ ಜಂಟಿ ಕಾರ್ಯದರ್ಶಿ ಜಯವಂತಿ ಸೋನ್ಸ್, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ., ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ಭಾರತಿ ನಾಯಕ್ ಉಪಸ್ಥಿತರಿದ್ದರು.

ಮೊದಲ ಬಾರಿಗೆ ನಡೆದ ಈ ಕ್ರೀಡಾಕೂಟದಲ್ಲಿ ಒಂದರಿಂದ ನಾಲ್ಕನೇ ತರಗತಿಯ ಕಬ್ಸ್ ಮತ್ತು ಬುಲ್‌ಬುಲ್‌ನ 124 ವಿದ್ಯಾರ್ಥಿಗಳು, ಐದನೇ ತರಗತಿಯಿಂದ ಹತ್ತನೇ ತರಗತಿಯ ಸ್ಕೌಟ್ಸ್ ಮತ್ತು ಗೈಡ್ಸ್‌ನ 1,755 ವಿದ್ಯಾರ್ಥಿಗಳು, ಪದವಿಪೂರ್ವ, ಪದವಿ, ಸ್ನಾತಕೋತ್ತರ ಹಾಗೂ ತಾಂತ್ರಿಕ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ನ 402 ವಿದ್ಯಾರ್ಥಿಗಳು ಒಟ್ಟು 2,281 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ವೈಯಕ್ತಿಕ ಏಳು ಗುಂಪು ಕ್ರೀಡೆಗಳು ಜರುಗಿದವು.

ಜಿಲ್ಲಾ ಸಾಹಿತ್ಯ ಸಮ್ಮೇಳನ ಊರ ಹಬ್ಬವಾಗಲಿ

ಬಾಕಿ ಕಾಮಗಾರಿ ಶೀಘ್ರ ಪೂರ್ಣ: ಅಧಿಕಾರಿಗಳಿಗೆ ಖಾದರ್ ಸೂಚನೆ

 

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…