ಆರೋಗ್ಯಪೂರ್ಣ ಜೀವನಕ್ಕೆ ಕ್ರೀಡೆ: ಚಂದ್ರಶೇಖರ ಅಮೈ ಅಭಿಮತ

Sub_Sports
Published on

ಸುಬ್ರಹ್ಮಣ್ಯ: ಆರೋಗ್ಯಪೂರ್ಣ ಜೀವನ ನಡೆಸಲು ಕ್ರೀಡೆ ಸಂಜೀವಿನಿ. ಶಾಲಾಮಟ್ಟದ ಕ್ರೀಡಾಕೂಟಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪ ಎಂದು ರಾಷ್ಟ್ರೀಯ ಕ್ರೀಡಾಪಟು ಚಂದ್ರಶೇಖರ ಅಮೈ ಹೇಳಿದರು.

ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಷನ್ ಸೊಸೈಟಿ ಆಶ್ರಯದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಮತ್ತು ವೇದವ್ಯಾಸ ವಿದ್ಯಾಲಯ ಬಿಳಿನೆಲೆ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಪ್ರೌಢ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರೌಢ ಶಾಲಾ ಮುಖ್ಯಶಿಕ್ಷಕ ಸತ್ಯಶಂಕರ ಭಟ್, ವೇದವ್ಯಾಸ ವಿದ್ಯಾಲಯದ ಮುಖ್ಯ ಶಿಕ್ಷಕ ಪ್ರಶಾಂತ್ ಬಿ, ದೈಹಿಕ ಶಿಕ್ಷಣ ಶಿಕ್ಷಣ ಶಿಕ್ಷಕ ವಿನಯ ಕುಮಾರ್, ಪಿಟಿಎ ಅಧ್ಯಕ್ಷ ಕೇಶವ, ನಿವೃತ್ತ ಮುಖ್ಯ ಶಿಕ್ಷಕ ಹಿರಿಯಣ್ಣ ಗೌಡ, ಶಿಕ್ಷಕ ಕಾರ್ತಿಕ್,ಹಳೇ ವಿದ್ಯಾರ್ಥಿ ಸಿನ್ನತಂಬಿ ಮತ್ತು ಕೃಷ್ಣ ಪ್ರಸಾದ್ ಇದ್ದರು.

ಶಿಕ್ಷಕ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಸಂಜೆ ಸಮಾರೋಪದಲ್ಲಿ ಆಡಳಿತ ಮಂಡಳಿ ಕೋಶಾಧಿಕಾರಿ ಕಲಾವಿದ ಕೆ.ಯಜ್ಞೇಶ್ ಆಚಾರ್ ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net