ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಕ್ರೀಡಾ ತಾರೆಯರು ಏನೇನು ವಿಷ್ ಮಾಡಿದರು ಗೊತ್ತೇ..?

Narendra modi.jpg birthday for web
Published on

ಬೆಂಗಳೂರು: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ದಿಗ್ಗಜ ಸಚಿನ್ ತೆಂಡುಲ್ಕರ್, ರಾಷ್ಟ್ರೀಯ ತಂಡದ ಮುಖ್ಯಕೋಚ್ ರವಿ ಶಾಸ್ತ್ರಿ, ರಿಯೋ ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಸೇರಿದಂತೆ ಹಲವು ಸ್ಟಾರ್ ಕ್ರೀಡಾಪಟುಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 70ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮೋದಿಗೆ ಶುಭಾಶಯ ಹೇಳಿದ್ದಾರೆ. ಹುಟ್ಟುಹಬ್ಬದ ಶುಭಾಶಯಗಳು ನರೇಂದ್ರ ಮೋದಿಜೀ ಎಂದು ಕೊಹ್ಲಿ ಟ್ವೀಟ್ ಮಾಡಿದ್ದರೆ, ದಿಗ್ಗಜ ಸಚಿನ್ ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

ಕನ್ನಡಿಗ ಕೆಎಲ್ ರಾಹುಲ್, ಶಿಖರ್ ಧವನ್, ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್, ಮಾಜಿ ಆಟಗಾರರಾದ ಸುರೇಶ್ ರೈನಾ, ಅನಿಲ್ ಕುಂಬ್ಳೆ, ಗೌತಮ್ ಗಂಭೀರ್, ಗೀತಾ ಪೋಗಟ್, ಬಾಕ್ಸರ್ ವಿಜೇಂದರ್ ಸಿಂಗ್ ಟ್ವಿಟರ್‌ನಲ್ಲಿ ಶುಭಾಶಯ ಹೇಳಿದ್ದಾರೆ. ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಆ ದೇವರು ನಿಮಗೆ ಆರೋಗ್ಯ ಹಾಗೂ ಸಂತೋಷ ನೀಡಲಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

70ನೇ ವರ್ಷಕ್ಕೆ ಕಾಲಿಟ್ಟ ನರೇಂದ್ರ ಮೋದಿ ಅವರಿಗೆ ವಿಶ್ವದ ಹಲವು ನಾಯಕರು, ವಿವಿಧ ಕ್ಷೇತ್ರದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net