More

    ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ

    ರಟ್ಟಿಹಳ್ಳಿ: ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವಿಕೆಯಿಂದ ದೈಹಿಕವಾಗಿ ಸದೃಡವಾಗಲು ಮತ್ತು ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷೆ ರೇಣುಕಾ ಗೂಳಪ್ಪನವರ ಹೇಳಿದರು.

    ಪಟ್ಟಣದ ಲಯನ್ಸ್ ಶಾಲೆಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹುಲ್ಲತ್ತಿ ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

    ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಸೋಲಿನಿಂದ ನಿರಾಶರಾಗದೇ ಮುಂದಿನ ಗೆಲುವಿಗೆ ಪ್ರಯತ್ನಪಡಬೇಕು ಎಂದರು.

    ಅಧ್ಯಕ್ಷತೆ ವಹಿಸಿದ್ದ ಎನ್.ಸಿ. ಕಠಾರೆ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.

    ಕ್ಷೇತ್ರ ಸಮನ್ವಯಾಧಿಕಾರಿ ರವಿಕುಮಾರ, ದೈಹಿಕ ಶಿಕ್ಷಣಾಧಿಕಾರಿ ರೇವಣಸಿದ್ದಪ್ಪ, ಶಿಕ್ಷಣ ಸಂಯೋಜಕ ಎನ್.ವಿ. ನಾಯಕ, ಬಿಆರ್‌ಪಿ ಎಸ್.ಕೆ. ಶಿಕಾರಿಪುರ, ಲಯನ್ಸ್ ಕ್ಲಬ್ ಪದಾಧಿಕಾರಿಗಳಾದ ಸುಮಂಗಲಾ ಮುದಿಗೌಡ್ರ, ಪೂರ್ಣಿಮಾ ವೇರ್ಣಿಕರ, ಕೈ.ವೈ. ಬಾಜೀರಾಯರ್, ರಾಜು ಬೋಗಾರ, ಮುಖ್ಯ ಶಿಕ್ಷಕ ವಿ.ಎಸ್. ಅರ್ಕಚಾರಿ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts