More

    ಕ್ರೀಡಾ ಚಟುವಟಿಕೆಯಿಂದ ಆರೋಗ್ಯ ವೃದ್ಧಿ

    ಧಾರವಾಡ: ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಆದ್ದರಿಂದ ಮಕ್ಕಳು ತನು- ಮನದಿಂದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸಿ ಉತ್ತಮ ಆರೋಗ್ಯ ತಮ್ಮದಾಗಿಸಿಕೊಳ್ಳಬೇಕು ಯೋಗ ಶಿಕ್ಷಕ ಮಂಜುನಾಥ ಹೂಗಾರ ಹೇಳಿದರು.
    ನಗರದ ಜೆ.ಎಸ್.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಕ್ರೀಡೆ ಮಕ್ಕಳ ಉತ್ತಮ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯಕ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳು ಆಸಕ್ತಿಯಿಂದ ಭಾಗವಹಿಸಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಸೋಲು ಗೆಲುವಿನ ಸೋಪಾನ. ಆದ್ದರಿಂದ ಆಟದಲ್ಲಿ ಸೋಲು ಹಾಗೂ ಗೆಲುವನ್ನು ಸಮ ಪ್ರಮಾಣದಲ್ಲಿ ಸ್ವೀಕರಿಸಿ ಸೋತಾಗ ಕುಗ್ಗದೆ, ಮುಂದಿನ ಗೆಲುವಿಗೆ ಪ್ರಯತ್ನಿಸಬೇಕು ಎಂದರು.
    ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನ ಪ್ರಾಚಾರ್ಯ ಮಹಾವೀರ ಉಪಾಧ್ಯೆ ಮಾತನಾಡಿ, ಸಂಸ್ಥೆಯ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡುತ್ತ ಬಂದಿದೆ. ಕ್ರೀಡಾಪಟುಗಳಿಗೆ ಶಿಷ್ಯವೇತನ ನೀಡುವ ಮೂಲಕ ಆರ್ಥಿಕವಾಗಿ ಆಸರೆಯಾಗಿದೆ ಎಂದರು.
    ಪ್ರಾಚಾರ್ಯೆ ಮೈನಾವತಿ ದಿವಟೆ ಅಧ್ಯಕ್ಷತೆ ವಹಿಸಿದ್ದರು. ಸುಧಾಮಣಿ ರಾವ್ ವೇದಿಕೆಯಲ್ಲಿದ್ದರು. ಮಹಾಂತೇಶ ಕಬನೂರ ಸ್ವಾಗತಿಸಿದರÀÄ. ಮಂಜುನಾಥ ದಾಸನಕೊಪ್ಪ ನಿರೂಪಿಸಿದರು. ಕವಿತಾ ಪಕ್ಕಳ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts