More

    ಮಾನಸಿಕ ವಿಕಾಸಕ್ಕೂ ಕ್ರೀಡೆ ಪೂರಕ

    ಹೊಳೆಹೊನ್ನೂರು: ಕ್ರೀಡೆ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಸಾಧಕವಾಗಬಲ್ಲದು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಎಂದು ಶಾಸಕಿ ಶಾರದಾ ಪೂರ‌್ಯಾನಾಯ್ಕ್ ತಿಳಿಸಿದರು.

    ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ್ದ ಕುವೆಂಪು ವಿವಿ ಮಟ್ಟದ ಪುರುಷರ ಜುಡೋ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಯಿಂದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಸರ್ಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
    ಕುವೆಂಪು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎನ್.ಡಿ.ವಿರೂಪಾಕ್ಷ, ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ನಿರಂತರ ಪ್ರ್ರೋತ್ಸಾಹ ನೀಡುತ್ತ ಬಂದಿದೆ. ವಿದ್ಯೆಯ ಗುರಿ ಸರ್ವತೋಮುಖ ವಿಕಾಸ, ಅದಕ್ಕೆ ಇಂತಹ ಚಟುವಟಿಕೆಗಳು ಪೂರಕ ಎಂದರು.
    ಪ್ರಾಚಾರ್ಯೆ ಡಾ. ಕೆ.ಆರ್.ಪ್ರತಿಭಾ, ದೈಹಿಕ ಶಿಕ್ಷಣ ಶಿಕ್ಷಕರಾದ ಡಾ. ರೋಹನ್ ಡಿಕಾಸ್ಟ, ಎಂ.ಡಿ.ವಿಶ್ವನಾಥ, ಕಾಲೇಜು ಅಭಿವೃದ್ಧಿ ಸಿಡಿಸಿ ಸಮಿತಿಯ ಉಪಾಧ್ಯಕ್ಷೆ ನಿರ್ಮಲಾ ಗಣೇಶ್ ಇತರರಿದ್ದರು. ಐಕ್ಯೂಎಸಿ ಸಂಚಾಲಕಿ ಡಾ. ಪಿ.ಭಾರತಿದೇವಿ ಸ್ವಾಗತಿಸಿದರು. ಗ್ರಂಥಪಾಲಕ ಡಾ. ಎಸ್.ರಾಜುನಾಯ್ಕ್ ವಂದಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಎನ್.ಆರ್.ಶಂಕರ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts