More

    ಕ್ರೀಡೆಯಿಂದ ಮಾನಸಿಕ, ದೈಹಿಕ ಬೆಳವಣಿಗೆ

    ಬೆಳಗಾವಿ: ದೈಹಿಕ, ಮಾನಸಿಕ ಸದೃಢತೆಗೆ ಸೈಕ್ಲಿಂಗ್ ಸಹಕಾರಿಯಾಗಿದೆ ಎಂದು ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಸ್ಫೂರ್ತಿ ಪಾಟೀಲ ಹೇಳಿದ್ದಾರೆ.

    ನಗರದ ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಫಿಟ್ ಇಂಡಿಯಾ ಸೈಕ್ಲೋಥಾನ್-2020’ ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜ್‌ನ ಪ್ರಾಚಾರ್ಯೆ ಪ್ರೊ.ಸಂಗೀತಾ ದೇಸಾಯಿ ಮಾತನಾಡಿ, ಸ್ಪರ್ಧಾತ್ಮಕ ದಿನಗಳಲ್ಲಿ ‘ಫಿಟ್ ಇಂಡಿಯಾ ಸೈಕ್ಲೋಥಾನ್’ ಆಂದೋಲನದ ಈ ಸೈಕ್ಲಿಂಗ್ ಕ್ರೀಡೆಯು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದರು.

    ಕಾಲೇಜ್ ಆಡಳಿತಾಧಿಕಾರಿ ರಾಜು ಜೋಶಿ, ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆನಂದ ದೇಶಪಾಂಡೆ, ದೈಹಿಕ ಶಿಕ್ಷಣ ಉಪನ್ಯಾಸಕ ವಿಶಾಂತ ದಾಮೋನೆ, ಮಹಾದೇವ ಶಿರಗಾಂವಕಾರ, ಪಿಯು ವಾಣಿಜ್ಯ ವಿಭಾಗದ ಸಂಯೋಜಕ ಪ್ರೊ.ನಾಗೇಶ್ವರ ಡೆಮಿನಕೊಪ್ಪ, ಪಿಯು ವಿಜ್ಞಾನ ವಿಭಾಗದ ಸಂಯೋಜಕ ಡಾ.ಶಣ್ಮುಖ ಕುಚಬಾಳ, ಪಿಯು ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಉಮೇಶ ಕಾಳೆ, ಪಿಯು ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಶಿವಪ್ರಸಾದ ಭಗವಂತನವರ, ಬಿಕಾಂ ವಿಭಾಗದ ಮುಖ್ಯಸ್ಥೆ ಪ್ರೊ.ಭಾರತಿ ಎಸ್.ಬಿ., ಬಿಎಸ್ಸಿ ವಿಭಾಗದ
    ಮುಖ್ಯಸ್ಥ ಪ್ರೊ.ನಿಂಗಪ್ಪ ಸಬರದ, ಎಂಕಾಂ ವಿಭಾಗದ ಮುಖ್ಯಸ್ಥ ಪ್ರೊ.ಸಂಜೀವ ಕುಮಾರಮಠ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts