More

    ಖಾಸಗಿ ಕ್ರೀಡಾ ಅಕಾಡೆಮಿಗಳಿಗೂ ಪ್ರೋತ್ಸಾಹ ಧನ

    ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಖೇಲೋ ಇಂಡಿಯಾ ಯೋಜನೆಯಡಿ 500 ಖಾಸಗಿ ಕ್ರೀಡಾ ಅಕಾಡೆಮಿಗಳಿಗೆ ಪ್ರೋತ್ಸಾಹ ಧನ ನೀಡಲು ಕ್ರೀಡಾ ಸಚಿವಾಲಯ ತೀರ್ಮಾನಿಸಿದೆ. ಇದಕ್ಕಾಗಿ ಕೆಲವೊಂದು ನಿಬಂಧನೆಗಳನ್ನು ರೂಪಿಸಿದ್ದು, ಅಕಾಡೆಮಿಯ ಗುಣಮಟ್ಟ, ತರಬೇತಿಗಿರುವ ಸೌಕರ್ಯಗಳ ಜತೆಗೆ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ಕ್ರೀಡಾಪಟುಗಳ ಸಾಧನೆಯನ್ನು ಪರಿಗಣಿಸಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. 2028ರ ಒಲಿಂಪಿಕ್ಸ್ ಗಮನದಲ್ಲಿಟ್ಟುಕೊಂಡು 14 ವಿಭಾಗದಲ್ಲಿ ಮೊದಲ ಹಂತದಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

    ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಖಾಸಗಿ ಅಕಾಡೆಮಿಗಳಿಗೂ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ದೇಶದಾದ್ಯಂತ ಕೆಲವೊಂದು ಅಕಾಡೆಮಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಇಂಥ ಅಕಾಡೆಮಿಗಳನ್ನು ಗುರುತಿಸುವ ಕೆಲಸ ಆಗಬೇಕಿದೆ. ಇದರಿಂದ ಅಕಾಡೆಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ಜತೆಗೆ ಮೂಲ ಸೌಕರ್ಯ ಒದಗಿಸುವುದೇ ಇದರ ಉದ್ದೇಶ ಎಂದು ತಿಳಿಸಿದ್ದಾರೆ.

    ಕ್ರೀಡಾ ಸಚಿವಾಲಯದ ನಿರ್ಧಾರವನ್ನು ಒಲಿಂಪಿಕ್ ಪದಕ ಶೂಟರ್ ಗಗನ್ ನಾರಂಗ್ ಸ್ವಾಗತಿಸಿದ್ದಾರೆ. ಖಾಸಗಿ ಅಕಾಡೆಮಿಗಳ ಪ್ರೋತ್ಸಾಹಕ್ಕೆ ಇದೊಂದು ಉತ್ತಮ ಮಾರ್ಗ ಹೇಳಿದ್ದಾರೆ. ನಾರಂಗ್ ಕೂಡ ಗನ್ ಫಾರ್ ಗ್ಲೋರಿ ಹೆಸರಿನಲ್ಲಿ ಅಕಾಡೆಮಿ ನಡೆಸುತ್ತಿದ್ದಾರೆ. ಭಾರತೀಯ ಕ್ರೀಡಾ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳು ಈ ಯೋಜನೆಗಾಗಿ ಒಟ್ಟಿಗೆ ಕಾರ್ಯನಿರ್ವಹಿಸಲಿವೆ. ಆದರೆ, ಖಾಸಗಿ ಅಕಾಡೆಮಿಗಳಿಗೆ ಕ್ರೀಡಾ ಸಚಿವಾಲಯ ನೀಡುತ್ತಿರುವ ಪ್ರೋತ್ಸಾಹ ಮೊತ್ತವನ್ನು ಬಹಿರಂಗಪಡಿಸಿಲ್ಲ.

    ಸಿಡ್ನಿ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ ಟೀಮ್ ಇಂಡಿಯಾ ಆಟಗಾರರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts