More

    ಶಿಕ್ಷಣ ಜತೆ ಕ್ರೀಡೆಗೂ ಇರಲಿ ಆದ್ಯತೆ

    ಹೊಳಲ್ಕೆರೆ: ವಿದ್ಯಾರ್ಥಿಗಳು ಶಿಕ್ಷಣದ ಜತೆ ಕ್ರೀಡೆಗೂ ಹೆಚ್ಚಿನ ಮಹತ್ವ ಕೊಡಬೇಕು. ಅಂದಾಗ ಏನನ್ನಾದರೂ ಸಾಧಿಸಲು ಸಾಧ್ಯವಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕ್ರೀಡಾಪಟುಗಳಿಗೆ ತಿಳಿಸಿದರು.
    ಪಟ್ಟಣದಲ್ಲಿರುವ ಕೊಟ್ರೆನಂಜಪ್ಪ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಹೊಳಲ್ಕೆರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ 2023-24ನೇ ಸಾಲಿನ ಕ್ರೀಡಾಕೂಟಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.
    ಐಎಎಸ್, ಐಪಿಎಸ್ ಪರೀಕ್ಷೆಯಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆಯಾಗಿದ್ದಾರೆ. ಆಟ ಒಂದು ದಿನಕ್ಕೆ ಸೀಮಿತವಾಗಿರಬಾರದು. ದಿನಕ್ಕೆ ಒಂದು ಗಂಟೆಯಾದರೂ ಕ್ರೀಡೆಯಲ್ಲಿ ತೊಡಗುವುದಾಗಿ ಪ್ರತಿಜ್ಞೆ ಮಾಡುವಂತೆ ಕ್ರೀಡಾಪಟುಗಳಿಗೆ ಸೂಚಿಸಿದ ಶಾಸಕ ಚಂದ್ರಪ್ಪ ಅವರು, ಅತ್ಯುನ್ನತ ಸ್ಥಾನಕ್ಕೆ ಏರಬೇಕಾದರೆ ಶಿಕ್ಷಣದ ಜತೆ ಕ್ರೀಡೆಗೂ ಪ್ರಾಮುಖ್ಯತೆ ಕೊಡಬೇಕು. ಆಗ ಜಗತ್ತೇ ನಿಮ್ಮನ್ನ ಗುರುತಿಸಲಿದೆ ಎಂದು ಕ್ರೀಡೆಗಿರುವ ಮಹತ್ವ ತಿಳಿಸಿದರು.
    ಕ್ಷೇತ್ರದಾದ್ಯಂತ ಕ್ರೀಡೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದೇನೆ. ಹತ್ತರಿಂದ ಹದಿನೈದು ಕೋಟಿ ರೂ.ಖರ್ಚು ಮಾಡಿ ಸ್ಟೇಡಿಯಂ ನಿರ್ಮಿಸಲಾಗುವುದು. ಇನ್ನು ಐದಾರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಿಂದ ರಾಷ್ಟ್ರಮಟಕ್ಕೆ ಹೋಗಿ ದೇಶಕ್ಕೆ ಕೀರ್ತಿ ತರುವಂತಾಗಬೇಕು ಎಂದು ಹಾರೈಸಿದರು.
    ವಾಗ್ದೇವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶ್ರೀನಿವಾಸ್, ತಾಲೂಕು ಆರೋಗ್ಯಾಧಿಕಾರಿ ಡಾ.ರೇಖಾ ಡಿ.ಟಿ., ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಲೋಕೇಶ್, ಪುರಸಭೆ ಮಾಜಿ ಅಧ್ಯಕ್ಷ ಆರ್.ಎ.ಅಶೋಕ್, ಕೆ.ಸಿ.ಮಂಜಪ್ಪ, ಎ.ಜಯಪ್ಪ, ರಾಜು, ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ದೈಹಿಕ ಶಿಕ್ಷಕರು ಇದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 27

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts