

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಆಸ್ಟ್ರೇಲಿಯಾ 5ರನ್ಗಳ ಜಯ ಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಆರಂಭಿಕರಾದ ಟ್ರಾವಿಸ್ ಹೆಡ್ (109 ರನ್, 67 ಎಸೆತ, 10 ಬೌಂಡರಿ, 7 ಸಿಕ್ಸರ್), ಡೇವಿಡ್ ವಾರ್ನರ್ (81 ರನ್, 65 ಎಸೆತ, 5 ಬೌಂಡರಿ, 6 ಸಿಕ್ಸರ್) 175ರನ್ಗಳ ಜತೆಯಾಟದ ಫಲವಾಗಿ 49.2 ಓವರ್ಗಳಲ್ಲಿ 388 ರನ್ ಗಳಿಸಿ ಆಲೌಟ್ ಆಯಿತು.
ಗಾಯದ ಸಮಸ್ಯೆಯಿಂದ ಬಳಲಿ 2023ರ ಏಕದಿನ ವಿಶ್ವಕಪ್ ಟೂರ್ನಿಯ ಆರಂಭಿಕ 5 ಪಂದ್ಯಗಳಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ 2 ಮಹತ್ತರ ದಾಖಲೆ ಬರೆಯುವ ಮೂಲಕ ಭರ್ಜರಿಯಾಗಿ ಪಾದಾರ್ಪಣೆ ಮಾಡಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ಆರಂಭಿಕರಾದ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಮೊದಲೆರಡು ಓವರ್ಗಳಲ್ಲಿ ಎಚ್ಚರಿಕೆಯ ಆಟವನ್ನು ಆಡಿದ್ದರು. 3ನೇ ಓವರ್ನಲ್ಲಿ ನ್ಯೂಜಿಲೆಂಡ್‍ನ ವೇಗಿ ಮ್ಯಾಟ್ ಹೆನ್ರಿ ಎಸೆದ 2 ನೋಬಾಲ್‍ನ ಲಾಭ ಪಡೆದ ಟ್ರಾವಿಸ್ ಹೆಡ್ 2 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ 2 ಎಸೆತಗಳಲ್ಲೇ 21 ರನ್ಗಳಿಸಿ ವಿಶ್ವದಾಖಲೆ ಬರೆದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕವನ್ನು ಸಿಡಿಸಿದ ಟ್ರಾವಿಸ್ ಹೆಡ್ ಮತ್ತೊಂದು ದಾಖಲೆ ಬರೆದಿದ್ದಾರೆ. ವಿಶ್ವಕಪ್ನಲ್ಲಿ ಅತಿವೇಗವಾಗಿ ಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್ವೆಲ್ (40 ಎಸೆತ, ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಮ್ (48 ಎಸೆತ), ಟ್ರಾವಿಸ್ ಹೆಡ್ (59 ಎಸೆತ), ಹೆನ್ರಿಚ್ ಕ್ಲಾಸೆನ್ ( 61 ಎಸೆತ), ರೋಹಿತ್ ಶರ್ಮಾ (63 ಎಸೆತ) ಏಕದಿನ ವಿಶ್ವಕಪ್ನಲ್ಲಿ ವೇಗದ ಶತಕ ಸಿಡಿಸಿದ ಟಾಪ್ 5 ಬ್ಯಾಟ್ಸಮನ್ಗಳಾಗಿದ್ದಾರೆ.