

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಕರ್ನಾಟಕದ ಕ್ರೀಡಾಭಿಮಾನಿಗಳ ನೆಚ್ಚಿನ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಮಸ್ತ ಕನ್ನಡಿಗರಿಗೆ ಶುಭ ಕೋರಿದೆ.
ಅಧಿಕೃತ ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದೆ. ನಾಯಕ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಡೇಲ್ ಸ್ಟೇನ್ ಮತ್ತು ಉಮೇಶ್ ಯಾದವ್ ಸೇರಿದಂತೆ ಎಲ್ಲಾ ಆಟಗಾರರು ಕನ್ನಡ ರಾಜ್ಯೋತ್ಸವಕ್ಕೆ ಶುಭ ಹಾರೈಸಿದ್ದಾರೆ.
ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಕನ್ನಡಿಗರು ಸಹ ಆರ್ಸಿಬಿಗೆ ರಾಜ್ಯೋತ್ಸವ ಶುಭಕೋರಿದ್ದಾರೆ. ಅಲ್ಲದೆ, ಐಪಿಎಲ್ ಗೆಲುವಿಗೆ ಶುಭಕೋರಿದ್ದಾರೆ. ಸದ್ಯ ಐಪಿಎಲ್ನಲ್ಲಿ ಉತ್ತಮ ಆಟದೊಂದಿಗೆ ಆರ್ಸಿಬಿ ಎರಡನೇ ಸ್ಥಾನದಲ್ಲಿದ್ದು, ಟ್ರೋಫಿ ಗೆಲುವಿನ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ.