ಐಪಿಎಲ್-18: ಪ್ಲೇಆಫ್ ಅವಕಾಶ ವೃದ್ಧಿಸಿಕೊಂಡ ಮುಂಬೈ ಇಂಡಿಯನ್ಸ್: ವಾಂಖೆಡೆಯಲ್ಲಿ ದಾಖಲೆ ಬರೆದ ರೋಹಿತ್ ಶರ್ಮ

New Project
Published on

ಮುಂಬೈ: ಇಂಗ್ಲೆಂಡ್ ತಾರೆ ವಿಲ್ ಜಾಕ್ಸ್ (36 ರನ್, 26 ಎಸೆತ, 3 ಬೌಂಡರಿ, 2 ಸಿಕ್ಸರ್, 14ಕ್ಕೆ 2 ವಿಕೆಟ್) ಆಲ್ರೌಂಡ್ ನಿರ್ವಹಣೆಯ ಬಲದಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ 18ನೇ ಆವೃತ್ತಿಯಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಎದುರು 4 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಇದರೊಂದಿಗೆ ಪ್ಲೇಆಫ್ ಅವಕಾಶ ವೃದ್ಧಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಪಡೆ ಅಂಕಪಟ್ಟಿಯಲ್ಲಿ 7ನೇ ಸ್ಥಾನ ಕಾಯ್ದುಕೊಂಡಿದೆ. ಟೂರ್ನಿಯಲ್ಲಿ 5ನೇ ಸೋಲುಂಡ ಪ್ಯಾಟ್ ಕಮ್ಮಿನ್ಸ್ ಬಳಗದ ಮುಂದಿನ ಹಾದಿ ಜಟಿಲಗೊಂಡಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಸನ್‌ರೈಸರ್ಸ್‌, ಆರಂಭಿಕ ಅಭಿಷೇಕ್ ಶರ್ಮ (40 ರನ್, 28 ಎಸೆತ, 7 ಬೌಂಡರಿ) ಹಾಗೂ ಹೆನ್ರಿಕ್ ಕ್ಲಾಸೆನ್ (37 ರನ್, 28 ಎಸೆತ, 3 ಬೌಂಡರಿ, 2 ಸಿಕ್ಸರ್) ಆಸರೆಯಲ್ಲಿ 5 ವಿಕೆಟ್‌ಗೆ 162 ರನ್‌ಗಳ ಪೈಪೋಟಿಯುತ ಮೊತ್ತ ಕಲೆಹಾಕಿತು. ಪ್ರತಿಯಾಗಿ ವೇಗಿ ಪ್ಯಾಟ್ ಕಮ್ಮಿನ್ಸ್ (26ಕ್ಕೆ 3) ಬಿಗಿ ದಾಳಿಯ ನಡುವೆಯೂ ಮುಂಬೈ, 18.1 ಓವರ್‌ಗಳಲ್ಲಿ 6 ವಿಕೆಟ್‌ಗೆ 166 ರನ್‌ಗಳಿಸಿ ಟೂರ್ನಿಯಲ್ಲಿ ಸತತ 2ನೇ ಮತ್ತು ಒಟ್ಟಾರೆ 3ನೇ ಗೆಲುವು ಕಂಡಿತು.

4. ರೋಹಿತ್ ಶರ್ಮ (102) ಐಪಿಎಲ್‌ನಲ್ಲಿ ಒಂದೇ ಕ್ರೀಡಾಂಗಣದಲ್ಲಿ (ವಾಂಖೆಡೆ) 100 ಸಿಕ್ಸರ್ ಸಿಡಿಸಿದ 4ನೇ ಬ್ಯಾಟರ್ ಎನಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸಾಧನೆ ಮಾಡಿರುವ ವಿರಾಟ್ ಕೊಹ್ಲಿ (130), ಕ್ರಿಸ್ ಗೇಲ್ (127), ಎಬಿ ಡಿವಿಲಿಯರ್ಸ್‌ (118) ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net