ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನ ಖಾಸಗಿ ವಿಡಿಯೋ ವೈರಲ್; ಹನಿಟ್ರ್ಯಾಪ್​ಗೆ ಒಳಗಾದ್ರಾ ಬಾಬರ್ ಅಜಮ್?

ಬಾಬರ್ ಅಜಮ್
Published on

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಅವರ ಖಾಸಗಿ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನು ನೋಡಿದ ಅನೇಕರು, ಬಾಬರ್ ಅಜಮ್ ಹನಿಟ್ರ್ಯಾಪ್​ಗೆ ಸಿಲುಕಿಕೊಂಡಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಇರುವುದು ಪಾಕಿಸ್ತಾನ ತಂಡದ ನಾಯಕ, ಸ್ಟಾರ್ ಆಟಗಾರ ಬಾಬರ್ ಅಜಮ್ ಎನ್ನಲಾಗಿದೆ. ಈ ವಿಡಿಯೋದಲ್ಲಿ ಹುಡುಗಿಯೊಬ್ಬಳೊಂದಿಗೆ ವಿಡಿಯೋ ಕಾಲ್​ನಲ್ಲಿ ಚ್ಯಾಟಿಂಗ್ ನಡೆಸುತ್ತಿರುವುದು ಕಂಡು ಬಂದಿದೆ.

ಬಾಬರ್ ಅಜಮ್ ಈ ಹಿಂದೆಯೂ ಇಂತದ್ದೇ ಸಂಕಷ್ಟವೊಂದಕ್ಕೆ ಸಿಲುಕಿಕೊಂಡಿದ್ದರು. ಹಮೀಜಾ ಮುಖ್ತಾರ್ ಎಂಬ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದರು ಎನ್ನಲಾಗಿತ್ತು. ಇದೀಗ ಈ ವಿಡಿಯೋ ಚ್ಯಾಟಿಂಗ್ ವೈರಲ್ ಆಗಿದ್ದು, ಪಾಕಿಸ್ತಾನ ತಂಡದ ನಾಯಕ ತಲೆತಗ್ಗಿಸುವಂತಾಗಿದೆ.

ಪಾಕಿಸ್ತಾನ ತಂಡದ ಎಲ್ಲಾ ಮೂರು ಸ್ವರೂಪಗಳ ತಂಡಕ್ಕೆ ಬಾಬರ್ ಅಜಮ್ ನಾಯಕರಾಗಿದ್ದಾರೆ. ಇತ್ತೀಚೆಗೆ ಪಾಕಿಸ್ತಾನ ತಂಡ ನಿರೀಕ್ಷಿತ ಮಟ್ಟದ ಗೆಲುವು ದಾಖಲಿಸಿಕೊಳ್ಳುವಲ್ಲಿ ಎಡವುತ್ತಿದೆ. ಇದರಿಂದ ಬಾಬರ್ ಸಾಕಷ್ಟು ಟೀಕೆಗೂ ಗುರಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 0-3 ಅಂತರದ ಸೋಲು, ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ 2-1 ಅಂತರದ ಸೋಲು, ಮೊದಲ ಬಾಋಇಗೆ ತವರಿನ ಟೆಸ್ಟ್​ ಸರಣಿಯಲ್ಲಿ ವೈಟ್​ವಾಶ್ ಪಾಕಿಸ್ತಾನ ತಂಡದ ಮುಖಭಂಗಕ್ಕೆ ಕಾರಣವಾಗಿತ್ತು.

ಸದ್ಯ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ನಾಯಕ ನಾಯಕ ಬಾಬರ್ ಅಜಮ್​ನನ್ನು ಹೊಣೆ ಮಾಡಲಾಗುತ್ತಿದೆ. ಬಾಬರ್ ನಾಯಕತ್ವದಿಂದ ಕೆಳಗಿಳಿಯಬೇಕು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹೀಗಾಗಿ ಬಾಬರ್​ನನ್ನು ಗುರಿಯಾಗಿಸುವ ನಿಟ್ಟಿನಲ್ಲಿ ಖಾಸಗಿ ವಿಡಿಯೋ ವೈರಲ್ ಮಾಡಲಾಗಿದೆ ಎಂದು ಅವರ ಅಭಿಮಾನಿಗಳು ಆರೋಪಿಸುತ್ತಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net