ಮೋದಿ ಸ್ಟೇಡಿಯಂನಲ್ಲಿ ಫೈನಲ್​ ವೀಕ್ಷಿಸುತ್ತಿರುವ ಅನುಷ್ಕಾ ಶರ್ಮಾ

anusahka
Published on

ಅಹಮದಾಬಾದ್‌: ವಿಶ್ವಕಪ್‌ ಫೈನಲ್​ ಪಂದ್ಯ ವೀಕ್ಷಿಸಲು ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅನುಷ್ಕಾ ಶರ್ಮಾ ಕಾಣಿಸಿಕೊಂಡರು. ಅವರು ಎಂದಿನಂತೆ ಸುಂದರವಾಗಿ ಕಾಣುತ್ತಿದ್ದರು.

ಟೀಂ ಇಂಡಿಯಾ ಭಾನುವಾರ ವಿಶ್ವಕಪ್ ಫೈನಲ್‌ನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇದು ಕ್ರಿಕೆಟ್ ಇತಿಹಾಸದಲ್ಲಿ ಒಂದು ಪ್ರಮುಖ ಕ್ಷಣವಾಗಿದೆ.

ಅನುಷ್ಕಾ ಶರ್ಮಾ ತನ್ನ ಪತಿ ಮತ್ತು ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬೆಂಬಲಿಸಲು ಮತ್ತು ಟೀಂ ಇಂಡಿಯಾ ಗೆಲುವು ಕಣ್ತುಂಬಿಕೊಳ್ಳಲು ಕ್ರೀಡಾಂಗಣಕ್ಕೆ ಬಂದಿದ್ದರು.

ವಿಶ್ವದ ಅತಿದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕ್ರಿಕೆಟ್ ವಿಶ್ವಕಪ್‌ ಫೈನಲ್​ ಪಂದ್ಯ ನಡೆಯುತ್ತಿದ್ದು, ಲಕ್ಷಕ್ಕೂ ಹೆಚ್ಚು ಕ್ರೀಡಾಭಿಮಾನಿಗಳು ಕಿಕ್ಕಿರಿದು ತುಂಬಿದ್ದಾರೆ. ಅನುಷ್ಕಾ ಪಂದ್ಯ ವೀಕ್ಷಿಸುತ್ತಿರುವ ಚಿತ್ರ ವೈರಲ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net