ಏಷ್ಯಾ ಕಪ್ ಟೂರ್ನಿಗೆ ಮುಹೂರ್ತ ನಿಗದಿ; ಭಾರತ ಪಾಕ್ ​ಪಂದ್ಯದ ಕಥೆ ಏನು..? | Asia Cup 2025

asia cup web
Published on

Asia Cup 2025: ಮುಂಬರುವ ಏಷ್ಯಾ ಕಪ್ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಸೆಪ್ಟೆಂಬರ್ 9 ರಿಂದ 28 ರವರೆಗೆ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಸ್ಪಷ್ಟಪಡಿಸಿದ್ದಾರೆ.

ಜುಲೈ 24 ರಂದು ಢಾಕಾದಲ್ಲಿ ನಡೆದ ಎಸಿಸಿ ಸಭೆಯ ನಂತರ ಈ ಪ್ರಕಟಣೆ ಹೊರಬಿದ್ದಿದೆ, ಯುನೈಟೆಡ್ ಅರಬ್ ಎಮಿರೇಟ್ಸ್​​ನಲ್ಲಿ ಆಡಿಸುವ ತೀರ್ಮಾನಕ್ಕೆ ಎಸಿಸಿ ಬಂದಿದ್ದು, ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಪಂದ್ಯಾವಳಿಯನ್ನು ಆಯೋಜಿಸಲಿವೆ. 2026ರ ಟಿ20 ವಿಶ್ವಕಪ್​​ನ ಸಿದ್ಧತೆಗಳಿಗೆ ಅನುಗುಣವಾಗಿ ಟಿ20 ಸ್ವರೂಪದಲ್ಲಿ ನಡೆಸಲಾಗುವುದು.ಉಳಿದಂತೆ ಇತರ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮುಖ್ಯಸ್ಥರೂ ಆಗಿರುವ ನಖ್ವಿ ಶನಿವಾರ (ಜುಲೈ 26) ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ದೃಢಪಡಿಸಿದ್ದಾರೆ.

ಭಾರತ, ಪಾಕಿಸ್ತಾನ್, ಶ್ರೀಲಂಕಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಯುಎಇ, ಹಾಂಗ್ ಕಾಂಗ್ ಮತ್ತು ಓಮನ್ ಈ ಟೂರ್ನಿಯಲ್ಲಿ ಭಾಗವಹಿಸಲಿದ್ದು, ಒಟ್ಟು 19 ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಇದ್ದು, ಬದ್ಧ ಎದುರಾಳಿಗಳ ನಡುವಿನ ಕಾದಾಟದ ಮೇಲೆ ಕ್ರಿಕೆಟ್ ಅಭಿಮಾನಿಗಳ ದೃಷ್ಠಿ ನೆಟ್ಟಿದೆ.ಈ ಆವೃತ್ತಿಯನ್ನು ಅಧಿಕೃತವಾಗಿ ಭಾರತವೇ ಆಯೋಜಿಸುತ್ತಿರುವುದರಿಂದ, ಪಂದ್ಯದ ವೇಳಾಪಟ್ಟಿಯನ್ನು ಅಂತಿಮಗೊಳಿಸುವ ಜವಾಬ್ದಾರಿ ಬಿಸಿಸಿಐ ಮೇಲಿದೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net