ಏಷ್ಯಾಕಪ್​ನಲ್ಲಿ ಇಂಡಿಯಾ vs ಪಾಕಿಸ್ತಾನ ಪಂದ್ಯಕ್ಕೆ ಭಾರಿ ಡಿಮ್ಯಾಂಡ್​: ಕೇವಲ 10 ಸೆಕೆಂಡಿಗೆ 16 ಲಕ್ಷ ರೂ.! Asia Cup 2025

Asia Cup
Published on

Asia Cup 2025 : ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ, ಇಡೀ ವಿಶ್ವ ಕ್ರಿಕೆಟ್‌ ಎದುರು ನೋಡುತ್ತದೆ. ಸಾಂಪ್ರದಾಯಿಕ ಎದುರಾಳಿಗಳು ಗೆಲುವಿಗಾಗಿ ಮೈದಾನದಲ್ಲಿ ಸೆಣಸಾಡುವಾಗ ಅದನ್ನು ಒಂದು ದೊಡ್ಡ ಹೋರಾಟದಂತೆ ಇಡೀ ಜಗತ್ತು ನೋಡುತ್ತದೆ. ಹಾಗಾಗಿಯೇ ಇಂಡೋ-ಪಾಕ್ ಪಂದ್ಯವನ್ನು ಹೈವೋಲ್ಟೇಜ್​ ಪಂದ್ಯ ಎಂದು ಕರೆಯುತ್ತಾರೆ. ಎರಡೂ ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ, ಎರಡೂ ಕ್ರಿಕೆಟ್​ ತಂಡಗಳು ಐಸಿಸಿ ಮತ್ತು ಎಸಿಸಿ ಈವೆಂಟ್‌ಗಳಲ್ಲಿ ಮಾತ್ರ ಸ್ಪರ್ಧಿಸುತ್ತವೆ.

2025ರ ಏಷ್ಯಾ ಕಪ್‌ನ ಭಾಗವಾಗಿ ಸೆಪ್ಟೆಂಬರ್ 14 ರಂದು ದುಬೈನಲ್ಲಿ ಪಾಕಿಸ್ತಾನ ಮತ್ತು ಭಾರತ ಮುಖಾಮುಖಿಯಾಗಲಿವೆ. ಆದಾಗ್ಯೂ, ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ (SPNI) ಭಾರತ vs ಪಾಕಿಸ್ತಾನ ಪಂದ್ಯದ ಕ್ರೇಜ್ ಅನ್ನು ಹೆಚ್ಚು ಲಾಭ ಮಾಡಿಕೊಳ್ಳಲು ಮುಂದಾಗಿದೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಏಷ್ಯಾಕಪ್‌ನಲ್ಲಿ ಭಾರತದ ಪಂದ್ಯಗಳ ಸಮಯದಲ್ಲಿ ಹತ್ತು ಸೆಕೆಂಡುಗಳ ಜಾಹೀರಾತಿಗೆ ಸೋನಿ ನೆಟ್‌ವರ್ಕ್ 14 ರಿಂದ 16 ಲಕ್ಷ ರೂ. ಶುಲ್ಕ ವಿಧಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯಕ್ಕೂ ಅದೇ ಬೆಲೆ ಅನ್ವಯವಾಗಲಿದೆ ಎಂದು ವರದಿಗಳಿವೆ.

ಇದೇ ವೇಳೆ ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ 2031 ರವರೆಗೆ ಏಷ್ಯಾ ಕಪ್‌ನ ಮಾಧ್ಯಮ ಹಕ್ಕುಗಳನ್ನು 170 ಮಿಲಿಯನ್ ಡಾಲರ್​ (ಭಾರತೀಯ ಕರೆನ್ಸಿಯಲ್ಲಿ 1,000 ಕೋಟಿ ರೂ.ಗೂ ಹೆಚ್ಚು) ಗೆ ಪಡೆದುಕೊಂಡಿದೆ. ಈ ಪಂದ್ಯಾವಳಿಯ ಪಂದ್ಯಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಹಾಗೂ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ.

ಈ ಮೆಗಾ ಈವೆಂಟ್ ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗಾಗಲೇ ಏಷ್ಯಾ ಕಪ್‌ಗಾಗಿ ತನ್ನ ತಂಡವನ್ನು ಘೋಷಿಸಿದ್ದರೆ, ಬಿಸಿಸಿಐ ಒಂದು ಅಥವಾ ಎರಡು ದಿನಗಳಲ್ಲಿ ಭಾರತೀಯ ತಂಡವನ್ನು ಪ್ರಕಟಿಸಲಿದೆ.

ಭಾರತ ತಂಡ (ಅಂದಾಜು)

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮಾನ್​ ಗಿಲ್, ಅಕ್ಷರ್ ಪಟೇಲ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಮತ್ತು ಜಿತೇಶ್ ಶರ್ಮಾ.

ಪಾಕಿಸ್ತಾನ ತಂಡ

ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಜ್, ಹುಸೇನ್ ತಲಾತ್, ಖುಶ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಸೀಮ್ ಜೂನಿಯರ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್, ಸಲ್ಮಾನ್ ಮಿರ್ಜಾ, ಶಾಹೀನ್ ಶಾ ಅಫ್ರಿದಿ ಮತ್ತು ಸುಫ್ಯಾನ್ ಮೋಕಿಮ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net