ASIAN GAMES: ಭಾರತ ಮಹಿಳಾ ಹಾಕಿ ತಂಡಕ್ಕೆ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್ ಅಭಿನಂದನೆ

ಭಾರತ ಆಟಗಾರ್ತಿಯರ ಪ್ರದರ್ಶನ ಪ್ರತಿಯೊಬ್ಬರಿಗೂ ಸ್ಫೂರ್ತಿ
asian games
ಭಾರತ ಮಹಿಳಾ ಹಾಕಿ ತಂಡಪಿಟಿಐ
Published on: 

ಬೆಂಗಳೂರು: 44 ವರ್ಷಗಳ ಬಳಿಕ ಏಷ್ಯನ್ ಕ್ರೀಡಾಕೂಟದಲ್ಲಿ ಸ್ವರ್ಣ ಪದಕ ಜಯಿಸಿದ ಭಾರತ ಮಹಿಳಾ ಹಾಕಿ ತಂಡದ ಸಾಧನೆಯನ್ನು ‌ಫಿಬಾ ಏಷ್ಯಾ ಅಧ್ಯಕ್ಷ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ.ಕೆ. ಗೋವಿಂದರಾಜ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.

1982ರಲ್ಲಿ ಕಡೆಯ ಬಾರಿಗೆ ಭಾರತ ಮಹಿಳಾ ಹಾಕಿ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿತ್ತು. ಇದೀಗ ಸಲೀಮಾ ಟೆಟೆ ಸಾರಥ್ಯದ ಭಾರತ ಸ್ವರ್ಣ ಪದಕ ಜಯಿಸುವ ಮೂಲಕ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ನೇರ ಅರ್ಹತೆ ಪಡೆದುಕೊಂಡಿದೆ. ಮಹಿಳಾ ತಂಡದ ಈ ಸಾಧನೆ ಮುಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಡಾ.ಕೆ.ಗೋವಿಂದರಾಜ್ ತಿಳಿಸಿದ್ದಾರೆ.

asian games
ಡಾ.ಕೆ. ಗೋವಿಂದರಾಜ್​ಸಂಗ್ರಹ ಚಿತ್ರ

ಇಡೀ ದೇಶವೇ ಹೆಮ್ಮೆ ಪಡುವಂತ ಸಾಧನೆಯನ್ನು ಭಾರತ ಮಹಿಳಾ ತಂಡ ಮಾಡಿದೆ. ಈ ಸಾಧನೆ ಪ್ರತಿಯೊಬ್ಬ ಮಹಿಳಾ ಕ್ರೀಡಾ ಪಟುಗಳಿಗೆ ಸ್ಫೂರ್ತಿಯಾಗಿದೆ. ಭವಿಷ್ಯದಲ್ಲಿ ಒಲಿಂಪಿಕ್ಸ್ ನಂಥ ಪ್ರತಿಷ್ಠಿತ ಕ್ರೀಡಾಕೂಟದಲ್ಲೂ ಭಾರತ ಮಹಿಳಾ ಹಾಕಿ ತಂಡ ಪದಕ ಜಯಿಸಲಿ ಎಂದು ಹಾರೈಸುತ್ತೇನೆ ಎಂದು ಡಾ.ಕೆ.ಗೋವಿಂದರಾಜ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net