

Australia tour: ಇದೇ ಅ.19ರಿಂದ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು, ಟಿ20 ಮತ್ತು ಏಕದಿನ ಸರಣಿಯನ್ನು ಆಡಲಿದೆ. ಈ ಪ್ರವಾಸದ ಸಮಯದಲ್ಲಿ, ಭಾರತ ತಂಡವು ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳನ್ನಾಡಲಿದೆ. ಈ ಹಿನ್ನೆಲೆ ಇಂದು ಬಿಸಿಸಿಐ ಈ ಎರಡು ಸರಣಿಗಳಿಗೆ ಪ್ರತ್ಯೇಕ ತಂಡಗಳನ್ನು ಪ್ರಕಟಿಸಿದ್ದು, ಏಕದಿನ ತಂಡದಲ್ಲಿ ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಸ್ಥಾನ ನೀಡಿದೆ.
ಈ ಹಿಂದೆ ಏಕದಿನ ನಾಯಕತ್ವವನ್ನು ವಹಿಸಿಕೊಂಡಿದ್ದ ರೋಹಿತ್ರನ್ನು ಕ್ಯಾಪ್ಟನ್ ಸ್ಥಾನದಿಂದ ಕೆಳಗಿಳಿಸಿರುವ ಬಿಸಿಸಿಐ, ಶುಭಮನ್ ಗಿಲ್ಗೆ ಕ್ಯಾಪ್ಟನ್ಸಿ ಹಸ್ತಾಂತರಿಸಿದೆ. ಈ ಮೂಲಕ ಟೆಸ್ಟ್ ನಾಯಕ ಗಿಲ್ಗೆ ಏಕದಿನ ನಾಯಕತ್ವದ ಜವಾಬ್ದಾರಿಯನ್ನೂ ಕೊಡಲಾಗಿದೆ. ಇನ್ನು ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ಕ್ಯಾಪ್ಟನ್ ಆಗಿ ತಂಡವನ್ನು ಮುನ್ನಡೆಸಲಿದ್ದಾರೆ.
2027ರಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಪ್ರಸ್ತುತ, ರೋಹಿತ್ ಶರ್ಮಾ ಅವರಿಗೆ 40 ವರ್ಷ ವಯಸ್ಸಾಗಿದ್ದು, ಅಲ್ಲಿಯವರೆಗೆ ಅವರು ಹೇಗೆ ಆಡುತ್ತಾರೆ ಎಂಬುದು ಸ್ಪಷ್ಟವಿಲ್ಲ. ಇದರ ಜತೆಗೆ ಫಿಟ್ನೆಸ್ ಹೇಗಿರುತ್ತದೆ ಎಂಬ ಬಗ್ಗೆ ಗೊಂದಲಗಳಿತ್ತು. ಹೀಗಾಗಿಯೇ, ಶುಭಮನ್ ಗಿಲ್ಗೆ ನಾಯಕತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಿರುವ ಬಿಸಿಸಿಐ, ರೋಹಿತ್ ಶರ್ಮಾ ಅವರನ್ನು ಆಟಗಾರನಾಗಿ ಮುಂದುವರಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ. ಇನ್ನು ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಷ್ಯಾಕಪ್ ಟೂರ್ನಿಯಿಂದ ಶ್ರೇಯಸ್ ಅಯ್ಯರ್ರನ್ನು ಕೈಬಿಟ್ಟಿದ್ದ ಬಿಸಿಸಿಐ, ಏಕದಿನ ಸರಣಿಯ ಭಾರತ ತಂಡಕ್ಕೆ ಅವರನ್ನೇ ಉಪನಾಯಕ ಎಂದು ಘೋಷಿಸಿದೆ.
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜ್ಯುರೆಲ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್.
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.