

ಬೆಂಗಳೂರು: ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.
ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಡಾ.ನಾರಾಯಣಗೌಡ ಅವರು, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೊಡಲ್ಪಡುವ ಕ್ರೀಡಾಪಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು.
ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. 2020-21ನೇ ಸಾಲಿನಲ್ಲಿ ಏಕಲವ್ಯ ಪ್ರಶಸ್ತಿಗೆ 151, ಕರ್ನಾಟಕ ಕ್ರೀಡಾರತ್ನ 53, ಕ್ರೀಡಾ ಪೋಷಕ 25 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ 28 ಅರ್ಜಿಗಳು ಸ್ವೀಕೃತವಾಗಿದ್ದವು. ಇದರಲ್ಲಿ ಪ್ರಶಸ್ತಿ ಆಯ್ಕೆಗೆ ನೇಮಿಸಲಾಗಿದ್ದ ತಜ್ಞರ ಸಮಿತಿ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಿದೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ, ದಿನಾಂಕವನ್ನು ನಿಗದಿಮಾಡಿ ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ಕ್ಯಾಪ್ಟನ್ ದಿಲೀಪ್ ಕುಮಾರ್- ಕಯಾಕಿಂಗ್ & ಕನೋಯಿಂಗ್