ಖೇಲೋ ಇಂಡಿಯಾ ಕ್ರೀಡಾಕೂಟದ ಮುಖ್ಯ ಅತಿಥಿಯಾಗಿ ಕಿಚ್ಚ ಸುದೀಪ್​ಗೆ ಆಹ್ವಾನ

sudeep
Published on

ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಕ್ರೀಡಾಕೂಟ ಯಶಸ್ವಿಯಾಗಿ ನಡೆಯುತ್ತಿದ್ದು, ನಾಳೆ ಸಮಾರೋಪ ಸಮಾರಂಭಕ್ಕೆ ನಟ ಕಿಚ್ಚ ಸುದೀಪ್​ ಅವರಿಗೆ ಆಹ್ವಾನ ನೀಡಲಾಗಿದೆ.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಟ ಸುದೀಪ್‌ಗೆ ಆಮಂತ್ರಣ ನೀಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಗೋಪಾಲಕೃಷ್ಣ ಅವರು, ಸುದೀಪ್ ಮನೆಗೆ ತೆರಳಿ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಪುಸ್ತಕ ನೀಡಿ ಆಹ್ವಾನ ನೀಡಿದ್ದಾರೆ.

ಕಳೆದ 9 ದಿನಗಳಿಂದ ಯಶಸ್ವಿಯಾಗಿ ಖೇಲೋ ಇಂಡಿಯಾ ಕ್ರೀಡಾಕೂಟ ನಡೆಯುತ್ತಿದೆ. ನಾಳೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ, ಪ್ರಹ್ಲಾದ್ ಜೋಶಿ, ಅನುರಾಗ್ ಸಿಂಗ್ ಠಾಕೂರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವಥ್ ನಾರಾಯಣ್‌, ನಟ ಸುದೀಪ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net