

Asia Cup: 2025ರ ಏಷ್ಯಾಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿಗೆ ಸೇರುವ ಸಾಧ್ಯತೆ ಇದ್ದು, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಟಸ್ಥ ಸ್ಥಳಗಳಾದ ದುಬೈ ಮತ್ತು ಅಬುದಾಬಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಇಚ್ಛೆ ವ್ಯಕ್ತಪಡಿಸಿದೆ ಎಂದು ಮೂಲಗಳು ಬಹಿರಂಗಪಡಿಸಿವೆ.
ಗುರುವಾರ(ಜುಲೈ 24) ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಏಷ್ಯಾ ಕಪ್ ಬಗ್ಗೆ ಚರ್ಚಿಸಲಾಯಿತು. ಇದರಲ್ಲಿ BCCI ಅಧಿಕಾರಿಗಳು ವರ್ಚುವಲ್ ಆಗಿ ಭಾಗವಹಿಸಿರುವುದಾಗಿ ತಿಳಿದುಬಂದಿದೆ.3 ಸ್ಥಳಗಳ ಬಳಕೆಗೆ ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಜತೆ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದರೂ, ಏಷ್ಯಾ ಕಪ್ಗೆ ಕೇವಲ ಎರಡನ್ನು ಸ್ಥಳಗಳನ್ನು ಮಾತ್ರ ಬಳಸಿಕೊಳ್ಳುವ ನಿರೀಕ್ಷೆಯಿದೆ.
ಇದನ್ನೂ ಓದಿ:ಮಹಿಳೆಯರು, ಮಕ್ಕಳ ಮೇಲೆ ದೌರ್ಜನ್ಯ
ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಮುಂದಿನ ದಿನಗಳಲ್ಲಿ ಸಭೆ ಸೇರಿ ಪಂದ್ಯಾವಳಿಯ ಸ್ಥಳಗಳು ಮತ್ತು ವೇಳಾಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏಷ್ಯಾಕಪ್ನ ಆತಿಥ್ಯದ ಹಕ್ಕು ಬಿಸಿಸಿಐ ಪಡೆದಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿನ ಭಯೋತ್ಪಾದಕ ದಾಳಿಯ ನಂತರ ಭಾರತ ಏಷ್ಯಾ ಕಪ್ನಲ್ಲಿ ಭಾಗವಹಿಸುವುದಿಲ್ಲ ಅಥವಾ ಆತಿಥ್ಯ ವಹಿಸುವುದಿಲ್ಲ ಎಂದು ಈ ಹಿಂದೆ ವರದಿಯಾಗಿತ್ತು.(ಏಜೆನ್ಸೀಸ್)