ಭಾರತೀಯ ಬೀಚ್ ಕುಸ್ತಿ ಸಂಘದ ಅಧ್ಯಕ್ಷರಾಗಿ ಬೆಳ್ಳಿಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ

web guna
Published on

ಬೆಂಗಳೂರು: ಕರ್ನಾಟಕ ಕುಸ್ಥಿ ಸಂಘದ ಅಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ ಅವರು ಭಾರತೀಯ ಬೀಚ್ ಕುಸ್ತಿ ಸಂಘದ ಅಧ್ಯಕ್ಷರಾಗಿಯೂ  ಆಯ್ಕೆಯಾಗಿದ್ದಾರೆ.

ನೋಯ್ಡದಲ್ಲಿ ಶುಕ್ರವಾರ ನಡೆದ ಭಾರತೀಯ ಕುಸ್ತಿ ಸಂಘದ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು ಭಾರತೀಯ ಬೀಚ್ ಕುಸ್ತಿ ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ಕರಾವಳಿ ಕುವರ: ದಕ್ಷಿಣಕನ್ನಡ ಜಿಲ್ಲೆಯ ನಡುಮೊಗರುಗುತ್ತು ವಿಠಲ ಶೆಟ್ಟಿ ಮತ್ತು ಬೆಳ್ಳಿಪ್ಪಾಡಿ ಉರಮಾಲು ಗುತ್ತು ಪ್ರಫುಲ್ಲ ವಿ.ಶೆಟ್ಟಿ ದಂಪತಿಗಳ ಪುತ್ರ ಹಾಗೂ ಡಾ.ಸಾಯಿ ರಮೇಶ್‌ ಶೆಟ್ಟಿ ಮತ್ತು ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಬಿ.ಗುಣರಂಜನ್ ಶೆಟ್ಟಿ ಮೂಲತಃ ಪುತ್ತೂರಿನ ಬೆಳ್ಳಿಪ್ಪಾಡಿ ಮನೆತನದವರು.

ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ನಂತರ ಸಂಘಕ್ಕೆ ಕಾಯಕಲ್ಪ ನೀಡಿದ್ದರು. ಕುಸ್ತಿಪಟುಗಳಿಗೆ ಅಗತ್ಯ ತರಬೇತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡುವ ಮೂಲಕ ಕುಸ್ತಿ ಪಂದ್ಯಾವಳಿಗಳಲ್ಲಿ ಕರ್ನಾಟಕದ ಕುಸ್ತಿಪಟುಗಳು ಜಯಶಾಲಿ ಆಗಲು ನೆರವಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net