Border-Gavaskar Trophy| ಆಸೀಸ್​ ವೇಗಿಗಳನ್ನು ಕಾಡಿದ ಜೈಸ್ವಾಲ್​-ರಾಹುಲ್​; ಸಂಕಷ್ಟದಲ್ಲಿ ಕಾಂಗರೂ ಪಡೆ

Jaiswal Rahul
Published on

ಪರ್ತ್​: ಇಲ್ಲಿನ ಆಪ್ಟಸ್​​ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್​-ಗವಾಸ್ಕರ್​ ಟ್ರೋಫಿ (Border-Gavaskar Trophy) ಟೆಸ್ಟ್​​​ ಸರಣಿಯ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡವು 218 ರನ್​ಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿದ್ದು, ಆತಿಥೇಯರನ್ನು ಸಂಕಷ್ಟಕ್ಕೆ ದೂಡಿದೆ.

7 ವಿಕೆಟ್​ ನಷ್ಟದೊಂದಿಗೆ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾವನ್ನು ಇನ್ನಿಲ್ಲದಂತೆ ಕಾಡಿದ ಭಾರತದ ಬೌಲರ್​ಗಳು ಎದುರಾಳಿ ತಂಡವನ್ನು 104 ರನ್​ಗಳಿಗೆ ಆಲೌಟ್​ ಮಾಡಿತು. 46 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್​ ಆರಂಭಿಸಿದ ಭಾರತ ತಂಡವು ದಿನದಾಟದ ಅಂತ್ಯಕ್ಕೆ 218 ರನ್​ಗಳ ಮುನ್ನಡೆಯನ್ನು ಸಾಧಿಸಿದೆ.

46 ರನ್​ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಯಶಸ್ವಿ ಜೈಸ್ವಾಲ್ (90 ರನ್​, 193 ಎಸೆತ, 7 ಬೌಂಡರಿ, 2 ಸಿಕ್ಸರ್​) ಹಾಗೂ ಕೆ.ಎಲ್. ರಾಹುಲ್ (62 ರನ್​, 153 ಎಸೆತ, 4 ಬೌಂಡರಿ) ತಲಾ ಅರ್ಧಶತಕ ಸಿಡಿಸುವ ಮೂಲಕ ದಿನವಿಡೀ ಕಾಂಗರೂ ಬೌಲರ್​ಗಳನ್ನು ಕಾಡಿದರು. ಮೊದಲ ಇನ್ನಿಂಗ್ಸ್​ನಲ್ಲಿ ಸರಾಗವಾಗಿ ವಿಕೆಟ್​ ಕಿತ್ತಿದ್ದ ಕಾಂಗರೂ ಬೌಲರ್​ಗಳು ಎರಡನೇ ದಿನ ಪರದಾಡಿದರು. ಅಂತಿಮವಾಗಿ ಎರಡನೇ ದಿನದಾಟದ ಅಂತ್ಯಕ್ಕೆ 172 ರನ್​ ಗಳಿಸುವ ಮೂಲಕ 218 ರನ್​ಗಳ ಭರ್ಜರಿ ಲೀಡ್​ ಪಡೆದಿದೆ.

ಭಾರತ (Team India) ಹಾಗೂ ಆಸ್ಟ್ರೇಲಿಯಾ (Australia) ನಡುವೆ ನಡೆಯಲಿರುವ 5 ಪಂದ್ಯಗಳ ಬಾರ್ಡರ್​-ಗವಾಸ್ಕರ್ (Border-Gavaskar)​ ಟೆಸ್ಟ್​ ಸರಣಿಯೂ ನವೆಂಬರ್​ 22ಕ್ಕೆ ಆರಂಭವಾಗಿದ್ದು, ಜನವರಿ 7 ರವರೆಗೆ ಆಯೋಜನೆಗೊಂಡಿದೆ. ಈ ಸರಣಿ ಆಡಲು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಆಸ್ಟ್ರೇಲಿಯಾಕ್ಕೆ ಪ್ರವಾಸ ಮಾಡಲಿದೆ. ಬಾರ್ಡರ್- ಗವಾಸ್ಕರ್ ಟ್ರೋಫಿ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023-2025 ಅಡಿಯಲ್ಲಿ ಆಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net