

IND vs ENG Test: ಪ್ರಸಕ್ತ ಆಂಗ್ಲರ ತವರಿನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ಭಾರತ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಪಡೆ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಬರ್ಮಿಂಗ್ಹ್ಯಾಮ್ನಲ್ಲಿ ಪ್ರಾರಂಭವಾಗಿರುವ ಎರಡನೇ ಟೆಸ್ಟ್ ಮ್ಯಾಚ್ನಲ್ಲಿ ತಂಡದ ಪರ ಜಸ್ಪ್ರಿತ್ ಬುಮ್ರಾ ಕಣಕ್ಕಿಳಿಯುತ್ತಿಲ್ಲ ಎಂಬುದು ದೃಢವಾಗಿದೆ. ಅವರ ಬದಲಿಗೆ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ಗೆ ಅವಕಾಶ ಕೊಡಲಾಗಿದೆ.
ಹೆಡಿಂಗ್ಲಿಯಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಸೋತ ಬಳಿಕ ಭಾರತ ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಗೊಳಿಸುವ ಗುರಿಯನ್ನು ಹೊಂದಿದೆ. ಹೀಗಾಗಿಯೇ ಅಂತಿಮವಾಗಿ ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಸ್ಟಾರ್ ವೇಗಿ ಜಸ್ಪ್ರಿತ್ ಬುಮ್ರಾ ವಿಶ್ರಾಂತಿಯ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಆಕಾಶ್ ದೀಪ್ರನ್ನು ಕರೆತರಲಾಗಿದೆ. ಮೊದಲ ಟೆಸ್ಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಶಾರ್ದೂಲ್ ಠಾಕೂರ್ರನ್ನು ಕೈಬಿಟ್ಟಿರುವ ಮ್ಯಾನೇಜ್ಮೆಂಟ್, ಅವರ ಬದಲಿಗೆ ನಿತೀಶ್ ಕುಮಾರ್ ರೆಡ್ಡಿಗೆ ತಂಡದಲ್ಲಿ ಸ್ಥಾನ ನೀಡಿದೆ.
ಇನ್ನು ಕೆಳ ಕ್ರಮಾಂಕದಲ್ಲಿಯೂ ಬ್ಯಾಟಿಂಗ್ ಮಾಡಬಲ್ಲ ಸ್ಪಿನ್ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡಲಾಗಿದೆ. ಇದರೊಂದಿಗೆ, ಕುಲದೀಪ್ ಯಾದವ್ಗೆ ಮತ್ತೊಮ್ಮೆ ನಿರಾಶೆ ಉಂಟಾಗಿದೆ. ಮಾಜಿ ಹಿರಿಯ ಕ್ರಿಕೆಟಿಗರು ಸೇರಿದಂತೆ ಹಲವರು ಕುಲದೀಪ್ಗೆ ಅವಕಾಶ ಕೊಡಬೇಕು ಎಂದು ಸೂಚಿಸಿದ್ದರು. ಆದರೆ, ಅಂತಿಮ ಲೆಕ್ಕಾಚಾರದಲ್ಲಿ ಅವರನ್ನು ಇನ್ನೊಮ್ಮೆ ಕೈಬಿಡಲಾಗಿದೆ. ಇದು ದಿಗ್ಗಜರಲ್ಲಿ ಅಸಮಾಧಾನ ಮೂಡಿಸಿದೆ ಎಂಬುದರಲ್ಲಿ ಆಶ್ಚರ್ಯವಿಲ್ಲ.
ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.