ಭೀಕರ ಅಪಘಾತ: ಭಾರತದ ಕ್ರಿಕೆಟಿಗ ರಿಷಬ್ ಪಂತ್​ಗೆ ಗಂಭೀರ ಗಾಯ

car accident Rishabh Pant
Published on

ದೆಹಲಿ: ಭಾರತದ ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರ ಗಾಯಗೊಂಡ ರಿಷಬ್​ ಪಂತ್​ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು(ಶುಕ್ರವಾರ) ಬೆಳಗ್ಗೆ BMW ಕಾರಿನಲ್ಲಿ ಭಾರತದ ಸ್ಟಾರ್​ ವಿಕೆಟ್​ಕೀಪರ್(wicketkeeper)​ ಮನೆಗೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ರಿಷಬ್​ ಪಂತ್​ ಅವರು ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ಮಾರ್ಗದಲ್ಲಿ ಉತ್ತರಾಖಂಡ್‌ನ ರೂರ್ಕಿ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ(accident) ಹೊಡೆದಿದ್ದು, ಕ್ಷಣಾರ್ಧದಲ್ಲೇ ಕಾರು ಹೊತ್ತಿ ಉರಿದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕಾರನ್ನು ರಿಷಬ್​ ಪಂತ್​ ಅವರೇ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅಪಘಾದಲ್ಲಿ ರಿಷಬ್​ ಪಂತ್​ ಗಂಭೀರ ಗಾಯಗೊಂಡಿದ್ದು, ತಕ್ಷಣ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆ ಮತ್ತು ಬೆನ್ನಿಗೆ ತೀವ್ರಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಅಪಘಾತಕ್ಕೀಡಾದ ಕಾರು, ಗಾಯಗೊಂಡು ಆಸ್ಪತ್ರೆ ಬೆಡ್​ ಮೇಲೆ ರಿಷಬ್​ ಪಂತ್​ ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಹಸ್ರಾರು ಅಭಿಮಾನಿಗಳಿ ರಿಷಬ್​ರ ಚೇತರಿಕೆಗಾಗಿ ದದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net