ಮಿನಿ ಕರ್ನಾಟಕ ಕ್ರೀಡಾಕೂಟ: ಫೆನ್ಸಿಂಗ್‌ನಲ್ಲಿ ಚಾರ್ವಿಗೆ ಚಿನ್ನದ ಪದಕ

ಬೆಂಗಳೂರು ನಗರವನ್ನು ಪ್ರತಿನಿಧಿಸಿದ ಚಾರ್ವಿ ಎಸ್.ಬಿ. ಅವರು ಸಾಬ್ರೆ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು
fencing
ಸ್ವರ್ಣ ಪದಕ ವಿಜೇತೆ ಚಾರ್ವಿ ಎಸ್​.ಬಿ.ಏಜೆನ್ಸಿ
Published on: 

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿರುವ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026ರಲ್ಲಿ ಬೆಂಗಳೂರು ನಗರವನ್ನು ಪ್ರತಿನಿಧಿಸಿದ ಚಾರ್ವಿ ಎಸ್.ಬಿ. ಫೆನ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಕ್ರೀಡಾಕೂಟದ ಫೆನ್ಸಿಂಗ್ ವಿಭಾಗದ ಸಾಬ್ರೆ (Sabre) ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚಾರ್ವಿ, ಪ್ರಥಮ ಸ್ಥಾನ ಪಡೆದು ಚಿನ್ನದ ಪದಕಕ್ಕೆ ಮುತ್ತಿಟ್ಟರು. ಈ ಸಾಧನೆಯ ಮೂಲಕ ಬೆಂಗಳೂರು ನಗರಕ್ಕೆ ಕೀರ್ತಿ ತಂದಿರುವ ಅವರು, ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ.