ಇತಿಹಾಸ ನಿರ್ಮಿಸಿದ ಸಾತ್ವಿಕ್ -ಚಿರಾಗ್; ವರ್ಲ್ಡ್ ಟೂರ್ ಫೈನಲ್ಸ್‌ಗೆ ಎಂಟ್ರಿ

chirag shetty and satwik for web
Published on

ನವದೆಹಲಿ: ಭಾರತದ ಸಾತ್ವಿಕ್ ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ ಜೋಡಿ ಮುಂಬರುವ ವರ್ಲ್ಡ್ ಟೂರ್ ಫೈನಲ್ಸ್ ಬ್ಯಾಡ್ಮಿಂಟನ್ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಪ್ರತಿಷ್ಠಿತ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡ ಭಾರತದ ಮೊದಲ ಡಬಲ್ಸ್ ಜೋಡಿ ಎನಿಸಿಕೊಂಡಿದೆ. ಶನಿವಾರ ನಡೆದ ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಜೋಡಿ ಸೆಮಿಫೈನಲ್‌ನಲ್ಲಿ ಮುಗ್ಗರಿಸಿತ್ತು. ಡಿಸೆಂಬರ್ 1 ರಿಂದ 5 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ಟೂರ್ನಿ ನಡೆಯಲಿದೆ. ಬ್ಯಾಡ್ಮಿಂಟನ್ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಅಂಕ ಸಂಗ್ರಹಿಸಿದ ಅಗ್ರ 8 ಮಂದಿ ಮಾತ್ರ ಅರ್ಹತೆ ಪಡೆಯಲಿದ್ದಾರೆ.

ಪ್ರತಿ ಡಿಸೆಂಬರ್ ತಿಂಗಳಲ್ಲಿ ಈ ಟೂರ್ನಿ ನಡೆಯಲಿದೆ. 2018ರಿಂದ ಈ ಟೂರ್ನಿಯನ್ನು ಆಯೋಜಿಸುತ್ತಾ ಬರಲಾಗಿದ್ದು, ಚೀನಾದ ಗುವಾಂಝುವಿನಲ್ಲಿ ನಡೆದ ಮೊದಲ ಟೂರ್ನಿಯಲ್ಲಿ ಭಾರತದ ಡಬಲ್ ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಚಾಂಪಿಯನ್ ಆಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net