

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕರಾಗಿದ್ದ ಉದ್ಯಮಿ ವಿಜಯ್ ಮಲ್ಯ, ವೆಸ್ಟ್ ಇಂಡೀಸ್ ಕ್ರಿಕೆಟ್ ದಾಂಡಿಗ, ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್ ರನ್ನು ಭೇಟಿಯಾಗಿ ಫೋಟೋ ಹಂಚಿಕೊಂಡಿದ್ದಾರೆ.
ಗೇಲ್ ಅವರೊಂದಿಗಿನ ಫೋಟೋ ಹಂಚಿಕೊಂಡಿರುವ ಮಲ್ಯ ಅವರನ್ನು ಗುಡ್ ಫ್ರೆಂಡ್ ಎಂದು ಬಣ್ಣಿಸಿದ್ದಾರೆ. ನನ್ನ ಗುಡ್ ಫ್ರೆಂಡ್ ಯುನಿವರ್ಸಲ್ ಬಾಸ್ ಕ್ರಿಸ್ಟೋಫರ್ ಹೆನ್ರಿ ಗೇಲ್ ಅವರನ್ನು ಭೇಟಿಯಾಗಿದ್ದು ಸಂತೋಷದ ಸಂಗತಿ. ನಾನು ಅವರನ್ನು ಆರ್ಸಿಬಿ ತಂಡಕ್ಕೆ ಸೇರಿಸಿಕೊಂಡಾಗಿನಿಂದಲೂ ಅವರ ಜತೆ ಉತ್ತಮ ಬಾಂಧ್ಯವ್ಯ ಇದೆ ಎಂದು ಮಲ್ಯ ಬರೆದುಕೊಂಡಿದ್ದಾರೆ.
2011ರಲ್ಲಿ ಗೇಲ್‍ರನ್ನು ಆರ್‌ಸಿಬಿ ತಂಡ ಖರೀದಿಸಿತ್ತು. ಆ ಬಳಿಕ ಆರ್‌ಸಿಬಿ ತಂಡದಲ್ಲಿ ಮಿಂಚಿದ ಗೇಲ್‍ರನ್ನು 2018ರ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡ ಖರೀದಿಸಿತು. 2022ರ ಐಪಿಎಲ್ ಮೆಗಾ ಹರಾಜಿನಿಂದ ಸ್ವತಃ ಗೇಲ್ ಹಿಂದೆ ಸರಿದು ಐಪಿಎಲ್‍ನಲ್ಲಿ ಆಡಿರಲಿಲ್ಲ.