ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಸಿಎಸ್​ಕೆ ಪಂದ್ಯ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ, ನಟ ಶಿವರಾಜ್​ಕುಮಾರ್

cm
Published on

ಬೆಂಗಳೂರು: ‘ಐಪಿಎಲ್ 2024ರ ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ತಂಡಗಳ ಮಧ್ಯೆ ಭಾರೀ ಪೈಪೋಟಿ ನಡೆಯುತ್ತಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪ್ಲೇಆಫ್ ದೃಷ್ಟಿಯಿಂದ ಉಭಯ ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಪಂದ್ಯದಲ್ಲಿ ಚೆನ್ನೈ ಗೆದ್ದರೆ ನೇರವಾಗಿ ಪ್ಲೇ ಆಫ್‌ಗೆ ಲಗ್ಗೆ ಇಡಲಿದೆ. ಮತ್ತೊಂದೆಡೆ, ಆರ್‌ಸಿಬಿಗೆ ಕೇವಲ ಪಂದ್ಯವನ್ನು ಗೆಲ್ಲುವುದು ಮುಖ್ಯವಲ್ಲ. ಆದಾಗ್ಯೂ, ಆರ್‌ಸಿಬಿ ಪ್ಲೇ ಆಫ್‌ಗೆ ಪ್ರವೇಶಿಸಬೇಕಾದರೆ ಅತ್ಯುತ್ತಮ ನೆಟ್​ ರನ್​ರೇಟ್​ನಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿದೆ.

2024ರ ಲೋಕಸಭೆ ಚುನಾವಣೆ ಬಳಿಕ ಪ್ರಚಾರದ ಒತ್ತಡದಿಂದ ರಿಲ್ಯಾಕ್ಸ್ ಮೂಡ್​ಗೆ ಜಾರಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಆರ್​ಸಿಬಿ- ಸಿಎಸ್​ಕೆ ನಡುವಿನ ರೋಚಕ ಪಂದ್ಯ ವೀಕ್ಷಿಸಲು ಕ್ರೀಡಾಂಗಣದಲ್ಲಿ ಹಾಜರಿದ್ದರು.

ಪಂದ್ಯ ವೀಕ್ಷಿಸಲು ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಅವರು ಆರ್​ಸಿಬಿ ಜರ್ಸಿ ತೊಟ್ಟು ಚಿನ್ನಸ್ವಾಮಿ ಮೈದಾನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸದ್ಯ ನಟ ಶಿವರಾಜ್​ ಕುಮಾರ್​ ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಆರ್​ಸಿಬಿ ಅಭಿಮಾನಿಗಳು ಮುಗಿಬಿದಿದ್ದಾರೆ.  ಕಟ್ಟಾ ಕ್ರಿಕೆಟ್ ಅಭಿಮಾನಿಯಾಗಿರುವ ಸಿದ್ದರಾಮಯ್ಯ ಅವರು ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ನೋಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

12ನೇ ಓವರ್​ನ ಮೊದಲ ಎಸೆತದಲ್ಲಿ ಸಿಂಗಲ್ ಕದಿಯುವ ಮೂಲಕ ಆರ್​ಸಿಬಿ ನಾಯಕ ಫಾಫ್ ತಮ್ಮ ಅರ್ಧಶತಕ ಪೂರೈಸಿದರು. ಇದರೊಂದಿಗೆ ಆರ್​ಸಿಬಿಯ ಶತಕ ಕೂಡ ಪೂರ್ಣಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net