

ಬೆಂಗಳೂರು : ಅವಳಿ ಒಲಿಂಪಿಕ್ಸ್ ಪದಕ ವಿಜೇತ, ಖ್ಯಾತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಇಂದು (03) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದರು.
ನೀರಜ್ ಚೋಪ್ರಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ನೀರಜ್ ಚೋಪ್ರಾಗೆ ಹಾರ ಹಾಕಿ, ಶಾಲು ಹೊದಿಸಿ ಮುಖ್ಯಮಂತ್ರಿಗಳು ಸನ್ಮಾನಿಸಿದರು. ಹಾಗೂ ನಮ್ಮ ದೇಶಕ್ಕೆ ಇನ್ನಷ್ಟು ಪದಕಗಳನ್ನು ಗೆದ್ದು ತರುವಂತೆ ಶುಭ ಹಾರೈಸಿದರು.
ಈ ವೇಳೆ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರು ಸಹ ಉಪಸ್ಥಿತರಿದ್ದರು.
(ಏಜೆನ್ಸೀಸ್)
ಜುಲೈ 5 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ವಿಶ್ವದ ಅನೇಕಾ ಜಾವೆಲಿನ್ ಎಸೆತಗಾರರು ಭಾಗವಹಿಸಲಿದ್ದು, ಈ ಮೂಲಕ ಭಾರತದಲ್ಲಿ ಜಾವೆಲಿನ್ ಸ್ಪರ್ಧೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವತ್ತ ನೀರಜ್ ಚೋಪ್ರಾ ಪಣ ತೊಟ್ಟಿದ್ದಾರೆ.