

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಬ್ಯಾಟರ್ ಅಂಬಟಿ ರಾಯುಡು ಐಪಿಎಲ್ ಮಾದರಿಯಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಸಿಪಿಎಲ್) ಸೇಂಟ್ ಕಿಟ್ಸ್ ನೇವಿಸ್ ಪೇಟ್ರಿಯಾಟ್ಸ್ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಟ್ರಿಸ್ಟನ್ಸ್ ಸ್ಟಾಬ್ಸ್ ಸ್ಥಾನಕ್ಕೆ ಬದಲಿ ಆಟಗಾರನಾಗಿ ರಾಯುಡು ತಂಡ ಸೇರಿಕೊಂಡಿದ್ದಾರೆ. ಇದರೊಂದಿಗೆ ಸಿಪಿಎಲ್‌ನಲ್ಲಿ ಆಡಲಿರುವ ಎರಡನೇ ಭಾರತೀಯ ಎನಿಸಲಿದ್ದಾರೆ.
2020ರಲ್ಲಿ ಲೆಗ್ ಸ್ಪಿನ್ನರ್ ಪ್ರವೀಣ್ ತಾಂಬೆ ಟ್ರಿನಿಬಾಗೂ ನೈಟ್‌ರೈಡರ್ಸ್ ಪರ ಆಡಿದ್ದರು. 37 ವರ್ಷದ ರಾಯುಡು, ಸಿಎಸ್‌ಕೆ ತಂಡ ಐದನೇ ಬಾರಿಗೆ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಐಪಿಎಲ್ ಟೂರ್ನಿಯ ಬಳಿಕ ಮೇ ತಿಂಗಳಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ೋಷಿಸಿದ್ದ ಸಿಎಸ್‌ಕೆ ತಂಡದ ಮಾಜಿ ಆಟಗಾರ ರಾಯುಡು, ವಿದೇಶೀ ಲೀಗ್‌ಗಳತ್ತ ಗಮನಹರಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಅಮೆರಿಕದ ಚೊಚ್ಚಲ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ್ರಾಂಚೈಸಿ ಒಡೆತನದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವನ್ನು ರಾಯುಡು ಪ್ರತಿನಿಧಿಸಿದ್ದರು. ಆಗಸ್ಟ್ 16ರಿಂದ ಸೆಪ್ಟೆಂಬರ್ 24ರವರೆಗೆ ಟೂರ್ನಿ ಆಯೋಜಿಸಲಾಗಿದೆ. ಮಹಿಳೆಯರ ಸಿಪಿಎಲ್‌ನಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗಯಾನಾ ಅಮೆಜಾನ್ ವಾರಿಯರ್ಸ್ ಪರ ಆಡಲಿದ್ದಾರೆ.