ಟೀಮ್​ ಇಂಡಿಯಾ ಆಟಗಾರರಿಗೆ ಅವಮಾನ... ಈ ಕಾರಣಕ್ಕೆ ಕೊಹ್ಲಿ ಲಂಡನ್​ಗೆ ಸ್ಥಳಾಂತರವಾದ್ರಂತೆ! Virat Kohli

ವಿರಾಟ್​ ಕೊಹ್ಲಿ
ವಿರಾಟ್​ ಕೊಹ್ಲಿ
Published on

ಪ್ರಮುಖ ಮುಖ್ಯಾಂಶಗಳು

  • ರೋಚಕ ಹಂತ ತಲುಪಿದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿ
  • ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ಕೊನೆಯ ಏಕದಿನ ಪಂದ್ಯ
  • ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಭಾರಿ ಮುಜುಗರ
Virat Kohli : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ರೋಚಕ ಹಂತವನ್ನು ತಲುಪಿದೆ. ಈ ಸರಣಿಯಲ್ಲಿ ಈಗಾಗಲೇ 2 ಏಕದಿನ ಪಂದ್ಯಗಳು ಮುಗಿದಿವೆ. ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿರುವುದರಿಂದ, ಡಿಸೆಂಬರ್ 6 ರಂದು ವಿಶಾಖಪಟ್ಟಣದ ಡಾ. ವೈ.ಎಸ್. ರಾಜಶೇಖರ್ ರೆಡ್ಡಿ {ಎಸಿಎ-ವಿಡಿಸಿಎ} ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಪಂದ್ಯ ನಿರ್ಣಾಯಕವಾಗಲಿದೆ.
ಈ ಪಂದ್ಯವನ್ನು ಗೆಲ್ಲುವ ಗುರಿಯೊಂದಿಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುರುವಾರ (ಡಿ.04) ವಿಶಾಖಪಟ್ಟಣವನ್ನು ತಲುಪಿದವು. ರಾಯ್‌ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ನಂತರ, ಕ್ರಿಕೆಟಿಗರು ವಿಶೇಷ ವಿಮಾನದಲ್ಲಿ ವಿಶಾಖಪಟ್ಟಣ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಎರಡೂ ತಂಡಗಳ ಆಟಗಾರರನ್ನು ಅಭಿಮಾನಿಗಳು ಭವ್ಯವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದಿಂದ, ಕ್ರಿಕೆಟಿಗರು ಬಿಗಿ ಭದ್ರತೆಯ ನಡುವೆ ವಿಶೇಷ ಬಸ್‌ನಲ್ಲಿ ರಾಡಿಸನ್ ಬ್ಲೂ ಹೋಟೆಲ್‌ಗೆ ಹೋದರು.
ವಿಶಾಖಪಟ್ಟಣಕ್ಕೆ ತೆರಳುತ್ತಿದ್ದಾಗ ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಭಾರಿ ಮುಜುಗರವಾಗಿದೆ. ರಾಯ್‌ಪುರವು ಆಧುನಿಕ ಸೌಲಭ್ಯಗಳನ್ನು ಹೊಂದಿರುವ ದೇಶದ ಅತ್ಯಂತ ಅಭಿವೃದ್ಧಿ ಹೊಂದಿದ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. ಆದಾಗ್ಯೂ, ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸದ ಎಸ್ಕಲೇಟರ್ ಭಾರತೀಯ ಕ್ರಿಕೆಟ್ ತಂಡಕ್ಕೆ ದೊಡ್ಡ ಸಮಸ್ಯೆ ಉಂಟುಮಾಡಿತು. ಭಾರತೀಯ ಆಟಗಾರರು ಅಲ್ಲಿಗೆ ಬಂದಾಗ, ಎಸ್ಕಲೇಟರ್ ಕಾರ್ಯನಿರ್ವಹಿಸುತ್ತಿರಲಿಲ್ಲ, ಆದ್ದರಿಂದ ಆಟಗಾರರು ತಮ್ಮ ಭಾರವಾದ ವಸ್ತುಗಳನ್ನು ಕೈಗಳಿಂದ ಹೊತ್ತುಕೊಂಡು ಮೆಟ್ಟಿಲುಗಳ ಮೇಲೆ ನಡೆಯಬೇಕಾಯಿತು. ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ವಿಮಾನ ನಿಲ್ದಾಣ ಆಡಳಿತ ಮಂಡಳಿ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.
ಇಷ್ಟೊಂದು ಉತ್ತಮ ಸೌಲಭ್ಯಗಳಿದ್ದರೂ, ಎಸ್ಕಲೇಟರ್ ಅನ್ನು ಸಹ ಸಮಯಕ್ಕೆ ಸರಿಯಾಗಿ ದುರಸ್ತಿ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಟೀಮ್ ಇಂಡಿಯಾ ಆಟಗಾರರ ಆಗಮನದ ಬಗ್ಗೆ ಮುಂಚಿತವಾಗಿಯೇ ತಿಳಿಸಿದ್ದರೂ, ಎಸ್ಕಲೇಟರ್ ದುರಸ್ತಿ ಮಾಡುವ ಯಾವುದೇ ಪ್ರಯತ್ನ ಮಾಡದಿರುವುದು ಟೀಕೆಗೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಆಟಗಾರರು ಬಂದಾಗ ಕನಿಷ್ಠ ಸೌಲಭ್ಯಗಳಿಗೂ ಏಕೆ ಆದ್ಯತೆ ನೀಡುವುದಿಲ್ಲ ಎಂದು ಕ್ರೀಡಾಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ. ಆದರೆ, ಈ ಘಟನೆಯ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಇನ್ನೂ ಸ್ಪಷ್ಟ ವಿವರಣೆಯನ್ನು ನೀಡಿಲ್ಲ. ವಿರಾಟ್ ಕೊಹ್ಲಿಯಂತಹ ಆಟಗಾರರು ಇಂತಹ ಸಮಸ್ಯೆಗಳಿಂದಾಗಿ ಲಂಡನ್‌ಗೆ ತೆರಳುತ್ತಿದ್ದಾರೆ ಎಂದು ಕ್ರೀಡಾಭಿಮಾನಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಇದೇ ವಿಚಾರವಾಗಿ ಐಸಿಸಿ ಅಂಪೈರ್​ ರಿಚರ್ಡ್​ ಕೆಟಲ್‌ಬರೋ ಕೂಡ ಪ್ರತಿಕ್ರಿಯೆ ನೀಡಿದ್ದು, ಈ ಕಾರಣಕ್ಕೆ ಕೊಹ್ಲಿ ಅವರು ಲಂಡನ್​ಗೆ ಸ್ಥಳಾಂತರವಾಗಿದ್ದಾರೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿಶಾಖಪಟ್ಟಣಂನಲ್ಲಿರುವ ವೈ.ಎಸ್. ರಾಜಶೇಖರ್ ರೆಡ್ಡಿ {ಎಸಿಎ-ವಿಡಿಸಿಎ} ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾದ ದಾಖಲೆಗಳು ಬಹಳ ಬಲಿಷ್ಠವಾಗಿವೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಇದುವರೆಗೆ 10 ಏಕದಿನ ಪಂದ್ಯಗಳನ್ನು ಆಡಿದೆ. ಈ ಏಳು ಪಂದ್ಯಗಳಲ್ಲಿ, 10 ಪಂದ್ಯಗಳನ್ನು ಗೆದ್ದಿದ್ದು, ಎರಡು ಪಂದ್ಯಗಳನ್ನು ಸೋತಿದೆ. ಒಂದು ಪಂದ್ಯವು ಟೈನಲ್ಲಿ ಕೊನೆಗೊಂಡಿದೆ. ಇದರೊಂದಿಗೆ, ಈ ಮೈದಾನದಲ್ಲಿ ಟೀಮ್ ಇಂಡಿಯಾದ ಗೆಲುವಿನ ಶೇಕಡಾವಾರು 70 ರಷ್ಟಿದೆ.
ಭಾರತ ಕೊನೆಯ ಬಾರಿಗೆ ಈ ಮೈದಾನದಲ್ಲಿ 2019 ರಲ್ಲಿ ಏಕದಿನ ಪಂದ್ಯವನ್ನು ಗೆದ್ದಿತ್ತು. ನಂತರ 2023 ರಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತು. ಈಗ, ಆರು ವರ್ಷಗಳ ನಂತರ ಮತ್ತೆ ಇಲ್ಲಿ ಸರಣಿಯನ್ನು ಗೆಲ್ಲುವ ದೃಢನಿಶ್ಚಯದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ಇದುವರೆಗೆ ಈ ಮೈದಾನದಲ್ಲಿ ಒಂದೇ ಒಂದು ಏಕದಿನ ಪಂದ್ಯವನ್ನು ಆಡಿಲ್ಲ. ದಕ್ಷಿಣ ಆಫ್ರಿಕಾ ಈ ಮೈದಾನದಲ್ಲಿ ಒಂದು ಟೆಸ್ಟ್ ಮತ್ತು ಒಂದು ಟಿ20 ಪಂದ್ಯವನ್ನು ಮಾತ್ರ ಆಡಿದೆ. ಆದರೆ ಅವರು ಆ ಎರಡ ಪಂದ್ಯದಲ್ಲಿ ಸೋತಿದ್ದಾರೆ, (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net