INDvsAFG: ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ, ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಧಮಾಕಾ ನಡೆಸಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನ್ ಬೌಲರ್ಗಳನ್ನು ಇನ್ನಿಲ್ಲದಂತೆ ಕಾಡಿದ ಟೀಮ್ ಇಂಡಿಯಾ, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 221 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ.