ಅಭಿಷೇಕ್ ಆರ್ಭಟ, ವಿಂಡೀಸ್ ಮಣಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದ ಟೀಮ್ ಇಂಡಿಯಾ!| IndVsWI

IndVsWI: ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ಇಂದು (ಭಾನುವಾರ) ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್​ ಇಂಡಿಯಾ 14 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 2-1 ಮುನ್ನಡೆ ಕಾಯ್ದುಕೊಂಡಿದೆ
ಅಭಿಷೇಕ್ ಆರ್ಭಟ, ವಿಂಡೀಸ್ ಮಣಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದ ಟೀಮ್ ಇಂಡಿಯಾ!| IndVsWI
Published on: 

ಟಾಸ್​ ಸೋತು ಮೊದಲು ಬ್ಯಾಟಿಂಗ್‌ಗಿಳಿದ ಭಾರತ ತಂಡಕ್ಕೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 69 ರನ್‌ಗಳ ಸ್ಪೋಟಕ ಇನ್ನಿಂಗ್ಸ್ ಕಟ್ಟಿ ಬೃಹತ್ ಮೊತ್ತಕ್ಕೆ ಬುನಾದಿ ಹಾಕಿದರು. ಇವರಿಗೆ ಉತ್ತಮ ಸಾಥ್ ನೀಡಿದ ಇಶಾನ್ ಕಿಶನ್ 18 ಎಸೆತಗಳಲ್ಲಿ 37 ರನ್ ಸಿಡಿಸಿದರೆ, ಉಪನಾಯಕ ತಿಲಕ್ ವರ್ಮಾ 28 ರನ್‌ಗಳ ಕಾಣಿಕೆ ನೀಡಿದರು.

ಮಧ್ಯಮ ಕ್ರಮಾಂಕದಲ್ಲಿ ನಿತೀಶ್ ಕುಮಾರ್ ರೆಡ್ಡಿ (21) ಹಾಗೂ ಅಕ್ಷರ್ ಪಟೇಲ್ (20) ಉಪಯುಕ್ತ ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ ಮೊತ್ತವನ್ನು 20 ಓವರ್‌ಗಳಲ್ಲಿ 223 ರನ್‌ಗಳಿಗೆ ತಲುಪಿಸಿದರು. ವಿಂಡೀಸ್ ಪರ ರೋಸ್ಟನ್ ಚೇಸ್ ಮತ್ತು ಶಮರ್ ಸ್ಪ್ರಿಂಗರ್ ತಲಾ ಎರಡು ವಿಕೆಟ್ ಪಡೆದು ಯಶಸ್ವಿ ಬೌಲರ್ ಎನಿಸಿಕೊಂಡರು.

Also Read
ಅಭಿಷೇಕ್​ ಶರ್ಮಾ ದಾಖಲೆಯ ಆಟ...ವಿಂಡೀಸ್​​ಗೆ ಬಿಗ್​ ಟಾರ್ಗೆಟ್​ ನೀಡಿದ ಟೀಮ್​ ಇಂಡಿಯಾ | IndVsWI
ಅಭಿಷೇಕ್ ಆರ್ಭಟ, ವಿಂಡೀಸ್ ಮಣಿಸಿ ಸರಣಿಯಲ್ಲಿ ಮುನ್ನಡೆ ಸಾಧಿಸಿದ ಟೀಮ್ ಇಂಡಿಯಾ!| IndVsWI

ಅರ್ಷ್‌ದೀಪ್ ಸಿಂಗ್ ಮಾರಕ ದಾಳಿ!

ಭಾರತ ನೀಡಿದ 224 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಆರಂಭಿಕ ಆಘಾತ ಎದುರಿಸಿದರೂ, ಕೆಳಕ್ರಮಾಂಕದಲ್ಲಿ ದಿಟ್ಟ ಹೋರಾಟ ನಡೆಸಿತು. ಕಮಿಲ್ ಪೂರನ್ (42) ಮತ್ತು ಶಿಮ್ರಾನ್ ಹೆಟ್ಮೆಯರ್ (43) ತಂಡವನ್ನು ಗೆಲುವಿನ ಹಾದಿಗೆ ಕೊಂಡೊಯ್ಯಲು ಯತ್ನಿಸಿದರೂ, ಭಾರತದ ಬೌಲರ್‌ಗಳು ನಿರ್ಣಾಯಕ ಹಂತದಲ್ಲಿ ಕಟ್ಟುನಿಟ್ಟಿನ ದಾಳಿ ನಡೆಸಿದರು. ಅದರಲ್ಲೂ ವಿಶೇಷವಾಗಿ ಯುವ ವೇಗಿ ಅರ್ಷ್‌ದೀಪ್ ಸಿಂಗ್ 18ನೇ ಓವರ್‌ನಲ್ಲಿ ಎರಡು ವಿಕೆಟ್ ಸೇರಿದಂತೆ ಒಟ್ಟು 3 ವಿಕೆಟ್ ಪಡೆದು ಪಂದ್ಯದ ದಿಕ್ಕನ್ನೇ ಬದಲಿಸಿದರು. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 209 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಇದರೊಂದಿಗೆ ಭಾರತ 14 ರನ್‌ಗಳ ಜಯದ ನಗೆಬೀರಿತು(ಏಜೆನ್ಸೀಸ್​).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net