ಟಾಸ್ ಗೆದ್ದ ಲಖನೌ ತಂಡದ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ನಾಯಕನ ನಿರ್ಧಾರವನ್ನು ಸರಿ ಎಂದು ಸಾಬೀತುಪಡಿಸಿದ ಅನುಭವಿ ವೇಗಿ ಮೊಹಮ್ಮದ್ ಶಮಿ, ಪಂದ್ಯದ ಮೊದಲ ಓವರ್‌ನ ಮೂರನೇ ಎಸೆತದಲ್ಲೇ ಅಪಾಯಕಾರಿ ಪ್ರಭ್‌ಸಿಮ್ರಾನ್ ಸಿಂಗ್ರನ್ನು ಪೆವಿಲಿಯನ್‌ಗೆ ಅಟ್ಟಿದರು. ಈ ಆರಂಭಿಕ ಆಘಾತದಿಂದ ಪಂಜಾಬ್ ಸಂಕಷ್ಟಕ್ಕೆ ಸಿಲುಕಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ನಂತರ ಕ್ರೀಸ್‌ಗೆ ಬಂದ ಪ್ರಿಯಾಂಶ್ ಆರ್ಯ ಮತ್ತು ಕೂಪರ್ ಕೊನೊಲಿ ಪಂದ್ಯದ ಚಿತ್ರಣವನ್ನೇ ಬದಲಿಸಿದರು.